ಬೆಳಗಾವಿ :
ಬೆಳಗಾವಿಯಲ್ಲಿ ನಡೆದ ವಿಧಾನ ಮಂಡಲ ಅಧಿವೇಶನ ವೇಳೆ ಎಂಇಎಸ್ ಮಹಾಮೇಳಾವ ಹಮ್ಮಿಕೊಂಡಿತ್ತು. ಆ ಸಂದರ್ಭದಲ್ಲಿ ಎಂಇಎಸ್ ಮುಖಂಡರ ಮುಖಕ್ಕೆ ಮಸಿ ಬಳಿದಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಳಗಾವಿ ಪೊಲೀಸರು ಇದೀಗ ಕನ್ನಡ ಮುಖಂಡರ ವಿರುದ್ಧ ಗೂಂಡಾ ಕಾಯಿದೆಯಡಿ ಕೇಸ್ ದಾಖಲು ಮಾಡಿದ್ದಾರೆ. ಇದು ಕನ್ನಡಿಗರ ಆಕ್ರೋಶಕ್ಕೆ ತುತ್ತಾಗಿದೆ. ಈ ಹಿನ್ನೆಲೆಯಲ್ಲಿ ಬೆಳಗಾವಿಯಲ್ಲಿ ಸಭೆ ತುರ್ತು ಸಭೆ ನಡೆಸಿದ ಕನ್ನಡ ಹೋರಾಟಗಾರರು ಪೊಲೀಸರ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದರು. ಚುನಾವಣೆ ಹಿನ್ನೆಲೆಯಲ್ಲಿ ಸಾರ್ವಜನಿಕ ಶಾಂತಿ ಹಾಗೂ ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಅನಿಲ್ ದಡ್ಡಿಮನಿ, ಸಂಪತ್ ಕುಮಾರ್ ದೇಸಾಯಿ ಅವರಿಗೆ ನೋಟಿಸ್ ನೀಡಿರುವುದಕ್ಕೆ ಕಿಡಿಕಾರಿದರು. ಈ ಬಗ್ಗೆ ಮಾತನಾಡಿದ ದೀಪಕ ಗುಡಗನಟ್ಟಿ, ಮಹಾದೇವ ತಳವಾರ, ಶ್ರೀನಿವಾಸ ತಾಳೂಕರ ಅವರು ಬೆಳಗಾವಿಯಲ್ಲಿ ಕನ್ನಡಕ್ಕಾಗಿ ಕೆಲಸ ಮಾಡಿದ ಕನ್ನಡಿಗರ ವಿರುದ್ಧ ಸರಕಾರ ಮತ್ತು ಪೊಲೀಸ್ ಇಲಾಖೆ ತೆಗೆದುಕೊಂಡ ನಿಲುವು ಖಂಡನೀಯ. ಈ ಬಗ್ಗೆ ಪೊಲೀಸ್ ಆಯುಕ್ತರನ್ನು ಭೇಟಿ ಮಾಡುವುದಾಗಿ ತಿಳಿಸಿದರು.