This is the title of the web page
This is the title of the web page

Live Stream

March 2023
T F S S M T W
 1
2345678
9101112131415
16171819202122
23242526272829
3031  

| Latest Version 8.0.1 |

Local News

ಸರ್ಕಾರದ ಯೋಜನೆಗಳನ್ನು ಸಿಎಸಸಿ ಮೂಲಕ ಜನರ ಮನೆ, ಮನೆಗೆ ತಲುಪಿಸಬೇಕಿದೆ Government projects should be delivered to people's homes through CASC


 

ಬೆಳಗಾವಿ:
ಅಂಗಡಿಕಾರರನ್ನು ಆರ್ಥಿಕವಾಗಿ ಸಬಲೀಕರಣ ಮಾಡುವ ಉದ್ದೇಶದಿಂದ ಸಿಎಸ್ ಸಿ ಸೇವೆಗಳನ್ನು ಪ್ರಾರಂಭಿಸಬೇಕು ಹಾಗೂ ಜಿಲ್ಲೆಯಲ್ಲಿರುವ ಎಲ್ಲ ನ್ಯಾಯಬೆಲೆ ಅಂಗಡಿಕಾರರು ಸಿಎಸಸಿ ಸೇವೆಗಳನ್ನು ಜನರ ಮನೆ, ಮನೆಗೆ ತಲುಪಿಸುವ ಕಾರ್ಯಮಾಡಬೇಕಿದೆ ಎಂದು ಜಿಲ್ಲಾ ಆಹಾರ ಇಲಾಖೆಯ ಜಂಟಿ ನಿರ್ದೇಶಕ ಶ್ರೀಶೈಲ ಕಂಕಣವಾಡಿ ಹೇಳಿದರು. ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು ಸರ್ಕಾರದ ಯೋಜನೆಗಳ ಬಗ್ಗೆ ಜನರಲ್ಲಿ ಅರಿವು ಮೂಡಿಸಬೇಕು. ಪ್ರಾಮಾಣಿಕ ಹಾಗೂ ಪಾರದರ್ಶಕತೆಯಿಂದ ಎಲ್ಲರೂ ಶಿಸ್ತುಬದ್ಧವಾಗಿ ಕೆಲಸ ನಿರ್ವಹಿಸಬೇಕೆಂದು ತಿಳಿಸಿದರು.
ಸಿಎಸ್ ಸಿ ಜಿಲ್ಲಾ ವ್ಯವಸ್ಥಾಪಕ ಮಲ್ಲಿಕಾರ್ಜುನ ಕರೆರುದ್ರನ್ನವರ ಮಾತನಾಡಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಜನರಿಗೆ ಸಾಕಷ್ಟು ಯೋಜನೆಗಳನ್ನು ಜಾರಿಗೆ ತರುತ್ತಿವೆ ಆದರೆ ಅವುಗಳನ್ನು ಸರಿಯಾದ ರೀತಿಯಲ್ಲಿ ತಲುಪಿಸುವ ಮಹತ್ವದ ಜವಾಬ್ದಾರಿ ತಮ್ಮ ಮೇಲಿದೆ ಎಂದು ಹೇಳಿ ಸಿಎಸಸಿ ಸೇವೆಗಳ ಬಗ್ಗೆ ಸವಿಸ್ತಾರವಾಗಿ ಮಾಹಿತಿ ನೀಡಿದರು.

ಜಿಲ್ಲೆಯ ನ್ಯಾಯಬೆಲೆ ಅಂಗಡಿಕಾರರು ಆಹಾರ ನಿರೀಕ್ಷಕರು ಸೇರಿದಂತೆ ಇಲಾಖೆಯ ಸಿಬ್ಬಂದಿಗಳು ಉಪಸ್ಥಿತರಿದ್ದರು.


Jana Jeevala
the authorJana Jeevala

Leave a Reply