ಬೆಂಗಳೂರು: ಅರಣ್ಯ ಹಾಗೂ ವನ್ಯಜೀವಿ ಸಂರಕ್ಷಣೆಗೆ ಸಂಬಂಧಿಸಿದ ಮಹತ್ವದ ನಿರ್ಧಾರಗಳನ್ನು ತೆಗೆದುಕೊಳ್ಳುವ ರಾಜ್ಯ ವನ್ಯಜೀವಿ ಮಂಡಳಿಯನ್ನು ಸರಕಾರ ರಚಿಸಿ ಆದೇಶ ಹೊರಡಿಸಿದೆ.
ಸಚಿವ ಎಂ.ಬಿ. ಪಾಟೀಲ ಅವರ ಪುತ್ರ ಧ್ರುವ, ಧಾರವಾಡ ಗ್ರಾಮಾಂತರ ಶಾಸಕ ವಿನಯ ಕುಲಕರ್ಣಿ ಅವರ ಪುತ್ರಿ ವೈಶಾಲಿ ಸೇರಿದಂತೆ 16 ಜನರನ್ನು ಸದಸ್ಯರನ್ನಾಗಿ ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ. ಮುಖ್ಯಮಂತ್ರಿ ಅಧ್ಯಕ್ಷರು ಮತ್ತು ಅರಣ್ಯ ಸಚಿವ ಈಶ್ವರ ಖಂಡ್ರೆ ಉಪಾಧ್ಯಕ್ಷರಾಗಿರುತ್ತಾರೆ.
ರಾಮದುರ್ಗ ಶಾಸಕ ಅಶೋಕ ಪಟ್ಟಣ, ಶಾಸಕ ಗಣೇಶ ಪ್ರಸಾದ್, ವಿಧಾನ ಪರಿಷತ್ ಸದಸ್ಯ ಪುಟ್ಟಣ್ಣ ಸೇರಿದಂತೆ 16 ಜನ ಸದಸ್ಯರಾಗಿ ನೇಮಕಗೊಂಡಿದ್ದಾರೆ