ಬೆಂಗಳೂರು :
ಕೋಳಿ ಸಾಕಣೆ ಕೃಷಿ ಚಟುವಟಿಕೆಯಾಗಿದೆ. ಇದನ್ನು ವಾಣಿಜ್ಯ ಚಟುವಟಿಕೆ ಎಂದು ಪರಿಗಣಿಸಿ ತೆರಿಗೆ ವಿಧಿಸುವ ಮತ್ತು ಕೋಳಿ ಸಾಕಾಣಿಕೆ ಕೇಂದ್ರವನ್ನು ವಾಣಿಜ್ಯ ಕಟ್ಟಡವನ್ನಾಗಿ ಪರಿಗಣಿಸುವ ಅಧಿಕಾರ ಗ್ರಾಮ ಪಂಚಾಯಿತಿಗೆ ಇಲ್ಲ ಎಂದು ಹೈಕೋರ್ಟ್ ಸ್ಪಷ್ಟಪಡಿಸಿದೆ.
ಕೋಳಿ ಸಾಕಾಣಿಕೆಯನ್ನು ವಾಣಿಜ್ಯ ಚಟುವಟಿಕೆಯನ್ನಾಗಿ ಪರಿಗಣಿಸುವ ಅಧಿಕಾರ ಗ್ರಾಮ ಪಂಚಾಯಿತಿಗೆ ಇಲ್ಲ. ಕೋಳಿ ಸಾಕಾಣಿಕೆ ಕಟ್ಟಡವನ್ನು ಕರ್ನಾಟಕ ಗ್ರಾಮ ಪಂಚಾಯಿತಿ ಸ್ವರಾಜ್ ಕಾಯ್ದೆ ಶೆಡ್ಯೂಲ್ ನಾಲ್ಕರ (2) ರಡಿ ವಾಣಿಜ್ಯ ಕಟ್ಟಡವನ್ನಾಗಿ ಪರಿಗಣಿಸಿ ತೆರಿಗೆ ವಿಧಿಸಲು ಅವಕಾಶವಿಲ್ಲ. ಸಾಕಾಣಿಕೆ ಕೇಂದ್ರವಿರುವ ಭೂಮಿ ಕೃಷಿ ಭೂಮಿಯಾಗಿಯೇ ಮುಂದುವರಿಯಲಿದೆ ಎಂದು ನ್ಯಾಯಾಲಯ ತಿಳಿಸಿದೆ.
ಬೆಂಗಳೂರು ಉತ್ತರ ತಾಲೂಕಿನ ಸೊಂಡಕೊಪ್ಪ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನಿವಾಸಿ ತಮ್ಮ ಕೋಳಿ ಸಾಕಣೆ ಕೇಂದ್ರಕ್ಕೆ ತೆರಿಗೆ ವಿಧಿಸಿದ್ದ ಗ್ರಾಮ ಪಂಚಾಯತ್ ಕ್ರಮ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸೂರಜ್ ಗೋವಿಂದರಾಜು ಅವರಿದ್ದ ನ್ಯಾಯಪೀಠ ಈ ಆದೇಶ ನೀಡಿದೆ.