ಬೆಳಗಾವಿ :
ಕೆಎಲ್ಇ ಸಂಸ್ಥೆಯ ಜಿ.ಎ. ಸಂಯುಕ್ತ ಪದವಿಪೂರ್ವ ಮಹಾವಿದ್ಯಾಲಯದಲ್ಲಿ ಗುರು ಪೂರ್ಣಿಮೆಯನ್ನು ಸೋಮವಾರ ಸಡಗರದಿಂದ ಆಚರಿಸಲಾಯಿತು. ಸಿ.ಪಿ.ದೇವಋಷಿ ಅಧ್ಯಕ್ಷತೆ ವಹಿಸಿದ್ದರು.
ಶಾಲೆಯ ಎಲ್ಲಾ ವಿದ್ಯಾರ್ಥಿಗಳು, ಶಾಲೆಯ ಪ್ರಧಾನಿ ಸಂಪತ್ ಕುಮಾರ ಪಾಟೀಲ ಹಾಗೂ ಉಪಪ್ರಧಾನಿ ಉಷಾ ರಾಠೋಡ ಕಾರ್ಯಕ್ರಮ ನೆರವೇರಿಸಿಕೊಟ್ಟರು. ಈ ಸಂದರ್ಭದಲ್ಲಿ ಅನೇಕ ಶಿಕ್ಷಕರು, ವಿದ್ಯಾರ್ಥಿಗಳು ಗುರು ಪೂರ್ಣಿಮೆ ಮಹತ್ವ ಕುರಿತು ಮಾತನಾಡಿದರು.