This is the title of the web page
This is the title of the web page

Live Stream

February 2023
T F S S M T W
 1
2345678
9101112131415
16171819202122
232425262728  

| Latest Version 8.0.1 |

Local News

ಗುರುವಂದನಾ ಕಾರ್ಯಕ್ರಮ…!!


ಸವದತ್ತಿ: ತಾಲೂಕಿನ ಯಲ್ಲಮ್ಮನ ಗುಡ್ಡದ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಇಂದು ಗುರುವಂದನಾ ಹಾಗೂ ಸ್ನೇಹ ಸಮ್ಮೇಳನ ಕಾರ್ಯಕ್ರಮ ಜರುಗಿತು.

ಕಾರ್ಯಕ್ರಮವನ್ನು ಹುಬ್ಬಳ್ಳಿ-ಧಾರವಾಡ ಸ್ಮಾರ್ಟ್ ಸಿಟಿ ನಿರ್ದೇಶಕರಾದ ಉಮಾ ಸಾಲಿಗೌಡರ ಉದ್ಘಾಟಿಸಿ ಮಾತನಾಡಿದ ಅವರು ಬೆಳಗಾವಿ ಜಿಲ್ಲೆಯಲ್ಲಿ ಬಹಳಷ್ಟು ಮೊರಾರ್ಜಿ ದೇಸಾಯಿ ಶಾಲೆಗಳು ಇದ್ದರು ಸವದತ್ತಿಯ ಈ ಶಾಲೆ ಎಲ್ಲ ಶಾಲೆಗಳಿಗೂ ಮಾದರಿ, ಇದು ನಂದನವನದಂತೆ ಮಾರ್ಪಟ್ಟಾಗಿದೆ. ಇಲ್ಲಿ ಕಲಿತ ಸಾಕಷ್ಟು ಜನ ಉನ್ನತ ಮಟ್ಟದ ಅಧಿಕಾರಿಯಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಮೊರಾರ್ಜಿ ಶಾಲೆಗಳಲ್ಲಿ ಶಿಕ್ಷಣದ ಜೋತೆಗೆ ಸಂಸ್ಕೃತಿಯನ್ನು ಕಲಿಸಲಾಗುತ್ತಿದೆ. ಎಂದು ಅಭಿಪ್ರಾಯ ಪಟ್ಟರು.

ಪ್ರಸ್ತುತ ಕಾರ್ಯಕ್ರಮದಲ್ಲಿ ಹುಬ್ಬಳ್ಳಿ-ಧಾರವಾಡ ಸ್ಮಾರ್ಟ್ ಸಿಟಿ ನಿರ್ದೇಶಕರಾದ ಉಮಾ ಸಾಲಿಗೌಡರ, ಸಹಾಯಕ ನಿರ್ದೇಶಕರು ಸಮಾಜಕಲ್ಯಾಣ ಇಲಾಖೆ ಸವದತ್ತಿಯ ಆರ್ ಕುಲಕರ್ಣಿ, ಮೊರಾರ್ಜಿ ದೇಸಾಯಿ ಶಾಲೆ ಪ್ರಾಚಾರ್ಯರಾದ ಎಮ್ ಎ ಮತ್ತು ಎಮ್ ವಿ ಕುಂಬಾರ, ಆರ್ ಬಿಸಿರೊಟ್ಟಿ, ಸೇರಿದಂತೆ ಸರ್ವಗುರು ವೃಂದ, ವಿದ್ಯಾರ್ಥಿಗಳು ಹಾಜರಿದ್ದರು.


Jana Jeevala
the authorJana Jeevala

Leave a Reply