ಹರಿಹರ: ಹರಿಹರ ವೀರಶೈವ ಲಿಂಗಾಯತ ಪಂಚಮಸಾಲಿ ಜಗದ್ಗುರು ಪೀಠದ ಆವರಣದಲ್ಲಿ ಜ.14ರಂದು ಮಕರ ಸಂಕ್ರಾಂತಿ ಹಬ್ಬದ ದಿನ ಶ್ರೀ ವಚನಾನಂದ ಸ್ವಾಮೀಜಿ ಸಾನ್ನಿಧ್ಯದಲ್ಲಿ ಸರಳವಾಗಿ ಹರಜಾತ್ರೆ ಆಚರಿಸಲು ನಿರ್ಧರಿಸಲಾಗಿದೆ ಎಂದು ಪೀಠದ ಆಡಳಿತಾಧಿಕಾರಿ ಡಾ. ಎಚ್.ಪಿ. ರಾಜ್ಕುಮಾರ್ ತಿಳಿಸಿದ್ದಾರೆ. ಭಾನುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ವಚನಾನಂದ ಶ್ರೀ, ಮುಂದಿನ ಸಂಕ್ರಾಂತಿಯವರೆಗೆ ಚನ್ನಮ್ಮಾಜಿ ಅವರ ಜೀವನದ ಬಗ್ಗೆ ರಾಜ್ಯಾದ್ಯಂತ ಜಿಲ್ಲಾ ಹಾಗೂ ತಾಲೂಕಿನಲ್ಲಿ ಕಾರ್ಯಕ್ರಮ ನಡೆಸಿ ಅವರ ಜೀವನಗಾಥೆ ಪಸರಿಸುವ ಕಾರ್ಯ ನಡೆಸಲಾಗುವುದು ಎಂದರು.