ಬೆಂಗಳೂರು :
ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿಯವರದ್ದು ಯಾವಾಗಲೂ ಹಿಟ್ ಅಂಡ್ ರನ್ ಕೇಸು. ವೃಥಾ ಆರೋಪಗಳನ್ನು ಮಾಡುತ್ತಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಅವರು ಇಂದು ಮಾಧ್ಯಮದವರೊಂದಿಗೆ ಮಾತನಾಡಿದರು.
ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿಯವರು ಇನ್ಸ್ಪೆಕ್ಟರ್ ವರ್ಗಾವಣೆ ವಿಚಾರದಲ್ಲಿ ವೈಎಸ್ಟಿ ಟ್ಯಾಕ್ಸ್ ಏಕೆ ಉಪಸ್ಥಿತರಿದ್ದರು ಎಂದು ಪ್ರಶ್ನಿಸಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಹಿಂದೆ ಪೆನ್ಡ್ರೈವ್ ತೋರಿಸಿದ್ದರು. ಅದನ್ನು ಸಾಬೀತು ಮಾಡಿದರೆ ಎಂದು ಪ್ರಶ್ನಿಸಿದ ಅವರು ಪೆನ್ಡ್ರೈವ್ ಇದ್ದರಲ್ಲವೇ ಹೊರಗೆಬಿಡುವುದು ಎಂದರು.
ಅನ್ನಭಾಗ್ಯ ಯೋಜನೆಗೆ ಅಕ್ಕಿ ನೀಡುವ ಬಗ್ಗೆ ಈಗಾಗಲೇ ಕೇಂದ್ರ ಸರ್ಕಾರದ ಜೊತೆ ಪಿಯೂಶ್ ಗೋಯಲ್ ಅವರೊಂದಿಗೆ ಮಾತನಾಡಿದ್ದು ಅಕ್ಕಿ ನೀಡುವುದಿಲ್ಲ ಎಂದು ಹೇಳಿದ್ದು, ಈ ವಿಚಾರದಲ್ಲಿ ಅವರು ರಾಜಕೀಯ ಮಾಡಿದ್ದಾರೆ ಎಂದು ತಿಳಿಸಿದರು.