ಬೆಂಗಳೂರು :
ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕರಾಗಿ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಮತ್ತೊಮ್ಮೆ ಅವಿರೋಧವಾಗಿ ಆಯ್ಕೆ ಆಗಿದ್ದಾರೆ.
ಕಳೆದ ವಿಧಾನಸಭೆ ಅವಧಿಯಲ್ಲೂ ಕುಮಾರಸ್ವಾಮಿ ಅವರೇ ಜೆಡಿಎಸ್ ಪಕ್ಷದ ಶಾಸಕಾಂಗ ನಾಯಕರಾಗಿ ಸದನದಲ್ಲಿ ಪಕ್ಷವನ್ನು ಮುನ್ನಡೆಸಿದ್ದರು.
ತಮ್ಮ ಅಧ್ಯಕ್ಷತೆಯಲ್ಲಿ ಈ ಅವಧಿಯ ಮೊದಲ ಶಾಸಕಾಂಗ ಪಕ್ಷದ ಸಭೆ ನಡೆಸಿದರು. ಈ ಸಭೆಯಲ್ಲಿ ಮಾಜಿ ಸಚಿವ ಎಚ್.ಡಿ.ರೇವಣ್ಣ ಸೇರಿದಂತೆ ಪಕ್ಷದ ಎಲ್ಲ 19 ನೂತನ ಶಾಸಕರು, ವಿಧಾನ ಪರಿಷತ್ನ ಎಲ್ಲ ಸದಸ್ಯರು ಹಾಜರಿದ್ದರು.
ವಿಧಾನಮಂಡಲದಲ್ಲಿ ಜನಪರವಾಗಿ, ವಿಷಯಾಧಾರಿತವಾಗಿ ಹೋರಾಟ ಮಾಡುವ ಬಗ್ಗೆ ಶಾಸಕಾಂಗ ಪಕ್ಷದ ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಯಿತು. ಪಕ್ಷವು ಚುನಾವಣೆಯಲ್ಲಿ ಸೋತಿದೆ. ಸೋತ ತಕ್ಷಣ ಎದೆಗುಂದುವ ಅಗತ್ಯ ಇಲ್ಲ. ತಳಮಟ್ಟದಿಂದ ಸಂಘಟನೆಯನ್ನು ಬಲಗೊಳಿಸಬೇಕಿದೆ. ಈ ನಿಟ್ಟಿನಲ್ಲಿ ಚುನಾಯಿತ ಶಾಸಕರು, ಸ್ಪರ್ಧೆ ಮಾಡಿದ್ದ ಎಲ್ಲಾ ಅಭ್ಯರ್ಥಿಗಳು ಕೆಲಸ ಮಾಡಬೇಕಿದೆ ಎಂದು ಕುಮಾರಸ್ವಾಮಿ ಹೇಳಿದರು.
ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕರಾಗಿ ಎಚ್ಡಿ ಕುಮಾರಸ್ವಾಮಿ ಅವಿರೋಧ ಆಯ್ಕೆ
