ಬೆಂಗಳೂರು: ಮುಂದಿನ ನಾಲ್ಕೈದು ದಿನಗಳ ಕಾಲ ಕರ್ನಾಟಕದಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಉತ್ತರ ಕನ್ನಡ, ಉಡುಪಿ, ಬೆಳಗಾವಿ, ಧಾರವಾಡ, ಹಾವೇರಿ, ಗದಗ, ದಾವಣಗೆರೆ, ಚಿಕ್ಕಬಳ್ಳಾಪುರ, ಕೋಲಾರ, ತುಮಕೂರು, ಶಿವಮೊಗ್ಗ, ಚಿಕ್ಕಮಂಗಳೂರು, ಕೋಲಾರ ದಾವಣಗೆರೆ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದ್ದು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಕರ್ನಾಟಕದ ಕರಾವಳಿ ಸೇರಿದಂತೆ ಹಲವಡೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡಿನ ಅನೇಕ ಜಿಲ್ಲೆಗಳಲ್ಲಿ ಗುಡುಗಿನಿಂದ ಕೂಡುದ ಸಾಧಾರಣ ಮಳೆಯಾಗಲಿದೆ ಎಂದು ತಿಳಿಸಲಾಗಿದೆ.
ಬೆಂಗಳೂರಿನಲ್ಲಿ ಅಕ್ಟೋಬರ್ 23 ರವರೆಗೆ ಸಾಧಾರಣದಿಂದ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಹೆಚ್ಚು ಮಳೆಯಾದ ಪ್ರದೇಶಗಳು
ಉತ್ತರ ಕನ್ನಡ ಜಿಲ್ಲೆಯ ಕದ್ರಾದಲ್ಲಿ 11 ಸೆಂಮೀ, ಶಿಗ್ಗಾವಿಯಲ್ಲಿ 10 ಸೆಂಮೀ,ಕುಂದಾಪುರದಲ್ಲಿ 9 ಸೆಂಮೀ, ಮುಂಡಗೋಡ, ಹಿರೇಕೆರೂರು, ಹೊನ್ನಾಳಿ ದಾವಣಗೆರೆಯಲ್ಲಿ 8 ಸೆಂಮೀ, ಶಿವಮೊಗ್ಗ, ಆನವಟ್ಟಿಯಲ್ಲಿ 7 ಸೆಂಮೀ ಮಳೆಯಾಗಿದೆ.


