ಬೆಂಗಳೂರು: ಕರ್ನಾಟಕದ ಏಳು ಜಿಲ್ಲೆಗಳಿಗೆ ಹವಾಮಾನ ಇಲಾಖೆ ಜುಲೈ 27ರಂದು ಆರೆಂಜ್ ಅಲರ್ಟ್ ನೀಡಿದ್ದು, ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಿದೆ.
ಜುಲೈ 27ರಂದು ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಹಾಗೂ ಮಲೆನಾಡಿನ ಜಿಲ್ಲೆಗಳಾದ ಚಿಕ್ಕಮಗಳೂರು, ಶಿವಮೊಗ್ಗ, ಹಾಸನ, ಕೊಡಗು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ನೀಡಲಾಗಿದೆ. ಉಳಿದ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ.
ಜುಲೈ 28ರಂದು ಕರಾವಳಿಯ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆ, ಹಾಸನ, ಕೊಡಗು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಉಳಿದ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.
ಜುಲೈ 29ರಂದು ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಹಾಸನ, ಕೊಡಗು ಮತ್ತು ಶಿವಮೊಗ್ಗ ಜಿಲ್ಲೆಗಳ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಉಳಿದ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.
ಜುಲೈ 30ರಂದು ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ.