ಬೆಂಗಳೂರು : ಕರ್ನಾಟಕದಲ್ಲಿ ವಾಯುಭಾರ ಕುಸಿತದಿಂದ ಭಾರಿ ಮಳೆಯಾಗುತ್ತಿದೆ. ಹವಾಮಾನ ಇಲಾಖೆಯು ಇನ್ನೂ ಎರಡ್ಮೂರು ದಿನಗಳ ಕಾಲ ಭಾರಿ ಮಳೆಯಾಗುವ ಮುನ್ಸೂಚನೆ ನೀಡಿದೆ.
ರಾಜ್ಯದ ಕರಾವಳಿ ಮತ್ತು ಒಳನಾಡು ಜಿಲ್ಲೆಗಳಲ್ಲಿ ಎರಡು ದಿನಗಳಿಂದ ಭಾರೀ ಮಳೆಯಾಗುತ್ತಿದ್ದು, ಇನ್ನೂ ಎರಡ್ಮೂರು ದಿನ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರಲ್ಲೂ ಮಳೆ ಮುಂದುವರೆಯಲಿದೆ.
ಆಗಸ್ಟ್ 21ರಂದು ಕರಾವಳಿಯ ಎಲ್ಲಾ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ನೀಡಲಾಗಿದೆ. ಕರಾವಳಿ ಭಾಗದಲ್ಲಿ ಗುಡ್ಡ ಕುಸಿತದ ಬಗ್ಗೆಯೂ ಎಚ್ಚರಿಕೆ ನೀಡಲಾಗಿದೆ.
ಬೆಂಗಳೂರು ಗ್ರಾಮಾಂತರ, ಮೈಸೂರು, ಮಂಡ್ಯ, ರಾಮನಗರ, ತುಮಕೂರು ಸೇರಿದಂತೆ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬೆಳಗಾವಿ, ವಿಜಯಪುರ, ಹಾಸನ, ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಮೈಸೂರು, ಮಂಡ್ಯ, ರಾಮನಗರ, ತುಮಕೂರು ಸೇರಿದಂತೆ ಮೊದಲಾದ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಮುನ್ಸೂಚನೆ ನೀಡಲಾಗಿದೆ. ಚಂಡಮಾರುತ, ವಾಯುಭಾರ ಕುಸಿತ ಪರಿಣಾಮ ಮುಂಗಾರು ಮಳೆ ಆರ್ಭಟ ಹೆಚ್ಚಾಗಿದೆ.