ಬೆಂಗಳೂರು : ಬಂಗಾಳಕೊಲ್ಲಿಯಲ್ಲಿ ಚಂಡಮಾರುತದ ಪರಿಚಲನೆ ಸೃಷ್ಟಿಯಾಗಿರುವ ಹಿನ್ನೆಲೆ ರಾಜ್ಯದಲ್ಲಿ ಏಪ್ರಿಲ್ 17ರ ವರೆಗೆ ಭಾರೀ ಮಳೆಯಾಗಲಿದೆ. ಇನ್ನೂ ಒಂದು ವಾರಕ್ಕೂ ಹೆಚ್ಚು ಕಾಲ ಬೆಂಗಳೂರು ಸೇರಿದಂತೆ ರಾಜ್ಯದಾದ್ಯಂತ ಮುಂಗಾರು ಪೂರ್ವ ಮಳೆ ಜೋರಾಗಿ ಸುರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ರಾಜ್ಯದ ಹಲವು ಭಾಗಗಳಲ್ಲಿ ಈಗಾಗಲೇ ಉತ್ತಮ ಮಳೆಯಾಗುತ್ತಿದ್ದು, ಗುಡುಗು ಸಹಿತ ಭಾರೀ ಮಳೆಗೆಯಾಗಿ ಕೆಲವೆಡೆ ಬೆಳೆ ಹಾನಿ ಸಂಭವಿಸಿದೆ.
ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಹಾಗೂ ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರ ಜಿಲ್ಲೆಗಳಲ್ಲಿ ಮಳೆಯಾಗಲಿದೆ. ಹಾಗೂ ಉತ್ತರ ಒಳನಾಡಿನ ಜಿಲ್ಲೆಗಳಾದ ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ವಿಜಯಪುರ, ಯಾದಗಿರಿ ಜಿಲ್ಲೆಗಳಲ್ಲಿ ಮಳೆಯಾಗಲಿದೆ.
ಭಾಗಮಂಡಲ, ಕುಮಟಾ, ಶಿರಸಿ, ಹಳಿಯಾಳ, ಜೋಯಿಡಾ ಸೇರಿದಂತೆ ಉತ್ತರ ಕನ್ನಡ ಜಿಲ್ಲೆಯ ಕೆಲ ಭಾಗಗಳು, ಬಸವನಬಾಗೇವಾಡಿ, ಖಾನಾಪುರ, ಯಡ್ರಾಮಿ, ಕಳಸ, ಪುತ್ತೂರು, ಹುನಗುಂದ, ರಬಕವಿ, ಹುಕ್ಕೇರಿ, ಅಫ್ಜಲ್ಪುರ, ಬೆಳಗಾವಿ, ಸರಗೂರು, ನಾಪೋಕ್ಲುವಿನಲ್ಲಿ ಜೋರಾಗಿ ಮಳೆಯಾಗಿದೆ.