ಬೆಂಗಳೂರು: ಮುಂದಿನ ನಾಲ್ಕೈದು ದಿನಗಳ ಕಾಲ ರಾಜ್ಯದ 17 ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ರಾಜ್ಯದ ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಉತ್ತರ ಒಳನಾಡಿನ ಜಿಲ್ಲೆಗಳಾದ ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ವಿಜಯಪುರ ಬಳ್ಳಾರಿ ಮತ್ತು ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಮಗಳೂರು, ಹಾಸನ, ಮಂಡ್ಯ, ರಾಮನಗರ, ಶಿವಮೊಗ್ಗ, ತುಮಕೂರಿನಲ್ಲಿ ಧಾರಾಕಾರ ಮಳೆ ಸುರಿಯುವ ಸಾಧ್ಯತೆ ಇದೆ ಎಂದು ಮುನ್ಸೂಚನೆ ನೀಡಲಾಗಿದೆ.
ಗುಡುಗು-ಮಿಂಚು, ಬಿರುಗಾಳಿ ಸಹಿತ ಮಳೆಯಾಗುವ ಸಂಭವವಿದ್ದು, 40 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಉಳಿದ 13 ಜಿಲ್ಲೆಗಳಲ್ಲಿ ಆಗಾಗ ಹಗುರದಿಂದ ಸಾಧಾರಣವಾಗಿ ಮಳೆ ಬರುವ ಸಾಧ್ಯತೆಗಳಿವೆ. ಕೆಲವೆಡೆ ತುಂತುರು ಮಳೆ ಬರಬಹುದು. ಈ ಮೂಲಕ ರಾಜ್ಯವ್ಯಾಪಿ ಮುಂಗಾರು ಮಳೆಯ ಸಿಂಚನವಾಗಲಿದೆ ಎಂದು ಹೇಳಿದೆ.