ಕಾರವಾರ : ಉತ್ತರ ಕನ್ನಡದಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇರುವುದರಿಂದ ಜಿಲ್ಲೆಯ ನಾಲ್ಕು ತಾಲೂಕುಗಳ ಅಂಗನವಾಡಿಗಳು, ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಿಗೆ ಶುಕ್ರವಾರ ಜುಲೈ 4ರಂದು ರಜೆ ಘೋಷಿಸಲಾಗಿದೆ.
ಹವಾಮಾನ ಇಲಾಖೆ ಉತ್ತರ ಕನ್ನಡ ಜಿಲ್ಲೆಯಲ್ಲಿ ಜುಲೈ 3ರಿಂದ 4ರ ವರೆಗೆ ಭಾರಿ ಮಳೆಯಾಗುವ ಮುನ್ಸೂಚನೆ ನೀಡಿದ್ದು, ರೆಡ್ ಅಲರ್ಟ್ ನೀಡಿದೆ. ಈ ಹಿನ್ನೆಲೆಯಲ್ಲಿ ಮಕ್ಕಳ ಸುರಕ್ಷತಾ ದೃಷ್ಟಿಯಿಂದ ಜಿಲ್ಲೆಯ ಶಿರಸಿ, ಸಿದ್ದಾಪುರ, ಯಲ್ಲಾಪುರ ಹಾಗೂ ಜೊಯಿಡಾ ತಾಲೂಕುಗಳ ಎಲ್ಲ ಅಂಗನವಾಡಿ, ಪ್ರಾಥಮಿಕ ಶಾಲೆಗಳು ಹಾಗೂ ಪ್ರೌಢಶಾಲೆಗಳಿಗೆ ಜುಲೈ 4ರಂದು ರಜೆ ಘೋಷಿಸಲಾಗಿದೆ.
ಚಿಕ್ಕಮಗಳೂರು: ಜಿಲ್ಲೆಯಲ್ಲಿ ಮಳೆ ಮುಂದುವರೆದಿದ್ದು ಮುಂಜಾಗೃತ ಕ್ರಮವಾಗಿ ಕಳಸ, ಶೃಂಗೇರಿ, ಕೊಪ್ಪ,ಮೂಡಿಗೆರೆ, ನರಸಿಂಹ ರಾಜಪುರ, ಚಿಕ್ಕಮಗಳೂರು ತಾಲೂಕು ವ್ಯಾಪ್ತಿಯ ಶಿಶುಪಾಲನ ಕೇಂದ್ರಗಳು, ಅಂಗನವಾಡಿ ಮತ್ತು ಎಲ್ಲಾ ಸರ್ಕಾರಿ ಮತ್ತು ಖಾಸಗಿ ಪ್ರಾಥಮಿಕ, ಪ್ರೌಢಶಾಲೆಗಳಿಗೆ ಜುಲೈ 4 ರಂದು(ಶುಕ್ರವಾರ) ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿ ಸಿ.ಎನ್. ಮೀನಾ ನಾಗರಾಜ್ ಆದೇಶಿಸಿದ್ದಾರೆ.