ಬೆಳಗಾವಿ: ರಾಮದುರ್ಗ ಪಟ್ಟಣದಲ್ಲಿ ಧಾರಾಕಾರ ಮಳೆಯಾಗಿದ್ದು, ಮನೆಯ ಮೇಲ್ಛಾವಣಿ ಕುಸಿದು ಬಿದ್ದು ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ನಡೆದಿದೆ.
ವಾಮನ್ ರಾವ್ ಬಾಪು ಪವಾರ್ (75)ಮೃತರು. ಮನೆಯಲ್ಲಿ ಮಲಗಿದ್ದ ವೇಳೆ ನಸುಕಿನ ನಾಲ್ಕು ಗಂಟೆ ಸುಮಾರಿಗೆ ಮನೆಯ ಮೇಲ್ಛಾವಣಿ ಕುಸಿದು ಅವರು ಮೃತಪಟ್ಟಿದ್ದಾರೆ. ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.