ಬೆಂಗಳೂರು : ಕರ್ನಾಟಕದ ಸುಮಾರು 10 ಜಿಲ್ಲೆಗಳಲ್ಲಿ ಇಂದಿನಿಂದ (ಮೇ 15) ಒಂದು ವಾರ ಜೋರಾಗಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಹಾಗೂ ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಶಿವಮೊಗ್ಗ, ಚಾಮರಾಜನಗರ, ಹಾಸನ, ಕೊಡಗು,ಮಂಡ್ಯ, ಮೈಸೂರು ಜಿಲ್ಲೆಗಳಲ್ಲಿ ಜೋರಾಗಿ ಮಳೆಯಾಗಲಿದೆ. ಮಳೆಯ ಜೊತೆಗೆ ಗುಡುಗು ಮಿಂಚು ಮತ್ತು ಗಂಟೆಗೆ 40 ರಿಂದ 50 ಕಿ.ಮೀ. ವೇಗದ ಗಾಳಿಯೂ ಬೀಸಲಿದೆ ಎಂದು ಮುನ್ಸೂಚನೆ ನೀಡಲಾಗಿದೆ.
ಮೇ 17ರಿಂದ ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ತುಮಕೂರಿನಲ್ಲಿ ಜೋರಾಗಿ ಮಳೆಯಾಗಲಿದೆ. ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಕೋಲಾರ, ರಾಮನಗರ, ವಿಜಯನಗರದಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಲಾಗಿದೆ.
ಶ್ರೀರಂಗಪಟ್ಟಣ, ಮಂಡ್ಯ, ನಿಪ್ಪಾಣಿ, ನಂಜನಗೂಡು, ಚನ್ನಪಟ್ಟಣ, ರಾಮನಗರ, ಹೆಸರಘಟ್ಟ, ಮಾಗಡಿ, ಕೃಷ್ಣರಾಜಪೇಟೆ, ಮದ್ದೂರು, ತಿಪಟೂರು, ಯುಗಟಿ, ತೊಂಡೇಭಾವಿ, ಹುಣಸೂರು, ಅಜ್ಜಂಪುರ, ಸಕಲೇಶಪುರ, ಬೇಗೂರು, ಹಾರಂಗಿ, ಕುಣಿಗಲ್, ಮುಳವಳ್ಳಿ, ಶ್ರವಣಬೆಳಗೊಳ, ಉತ್ತರ ಕನ್ನಡ ಜಿಲ್ಲೆಯ ಸಿರಸಿ, ಸಿದ್ದಾಪುರ, ಚಿಕ್ಕಮಗಳೂರು, ಹುಬ್ಬಳ್ಳಿ-ಧಾರವಾಡ, ಬಾಗಲಕೋಟೆ, ಯಾದಗಿರಿ, ಶಿವಮೊಗ್ಗ ಮೊದಲಾದಡೆ ಮಳೆಯಾಗಿದೆ ಎಂದು ವರದಿಯಾಗಿದೆ.