ಬೆಳಗಾವಿ : ಅಪಘಾತದಲ್ಲಿ ಗಾಯಗೊಂಡು ನಗರದ ವಿಜಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಗುಣಮುಖರಾಗಿದ್ದು, ಭಾನುವಾರ (ಜನವರಿ 26) ಬೆಳಗ್ಗೆ 8 ಗಂಟೆಗೆ ಆಸ್ಪತ್ರೆಯಿಂದ ಬಿಡುಗಡೆಯಾಗಿ ಮನೆಗೆ ತೆರಳಲಿದ್ದಾರೆ.
ಜನವರಿ 14 ರಂದು ಬೆಂಗಳೂರಿನಲ್ಲಿ ನಡೆದ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ಭಾಗವಹಿಸಿ ಬೆಳಗಾವಿಗೆ ವಾಪಸಾಗುತ್ತಿದ್ದಾಗ ಚನ್ನಮ್ಮನ ಕಿತ್ತೂರು ತಾಲೂಕಿನ ಅಂಬಡಗಟ್ಟಿ ಬಳಿ ಕಾರು ಮರಕ್ಕೆ ಢಿಕ್ಕಿ ಹೊಡೆದು ಸಂಭವಿಸಿದ ಭೀಕರ ಅಪಘಾತದಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹಾಗೂ ಅವರ ಸಹೋದರ ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಗಾಯಗೊಂಡಿದ್ದರು. ಲಕ್ಷ್ಮೀ ಹೆಬ್ಬಾಳ್ಕರ್ ಅವರ ಬೆನ್ನಿನ ಮೂಳೆಯಲ್ಲಿ ಸೀಳು ಕಂಡು ಬಂದಿದ್ದು, ಬೆಳಗಾವಿಯ ಖಾಸಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು.