ಬೆಂಗಳೂರು :
ಬೆಂಗಳೂರಿನ ವಿಮಾನ ನಿಲ್ದಾಣದಲ್ಲಿ ಭಾರತೀಯ ರಾಷ್ಟ್ರೀಯ ಕ್ರಿಕೆಟ್ ತಂಡದ ಮಾಜಿ ಮಧ್ಯಮ ವೇಗದ ಬೌಲರ್ ವೆಂಕಟೇಶ್ ಪ್ರಸಾದ್ ಹಾಗೂ ಅವರ ಧರ್ಮಪತ್ನಿಯವರು ಇಂದು ರಾಜ್ಯದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹಾಗೂ ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಅವರನ್ನು ಆಕಸ್ಮಿಕವಾಗಿ ಭೇಟಿಯಾದರು.
ರಾಜಕೀಯದ ಬಗ್ಗೆ ಹೆಚ್ಚಿನ ಆಸಕ್ತಿ ಹೊಂದಿರುವ ವೆಂಕಟೇಶ ಪ್ರಸಾದ, ಪ್ರಸ್ತುತ ರಾಜಕೀಯ ಬೆಳವಣಿಗೆಗಳ ಬಗ್ಗೆ ಕೆಲಹೊತ್ತು ಚರ್ಚಿಸಿದರು.

 
             
         
         
        
 
  
        
 
    