ನವದೆಹಲಿ: ಭದ್ರತೆ, ಆರ್ಥಿಕ ಮತ್ತು ರಾಜಕೀಯ ವ್ಯವಹಾರಗಳ ಕುರಿತು ದೇಶದ ಅತ್ಯುನ್ನತ ನಿರ್ಧಾರ ತೆಗೆದುಕೊಳ್ಳುವ ವಿವಿಧ ಸಂಪುಟ ಸಮಿತಿಗಳನ್ನು ಮೋದಿ ಸರ್ಕಾರ ಬುಧವಾರ ರಚಿಸಿದೆ.
ಸಂಸ್ಥೆಗಳು ಸೇರಿದಂತೆ ವಿವಿಧ ಕ್ಯಾಬಿನೆಟ್ ಸಮಿತಿಗಳನ್ನು ಮೋದಿ ಸರ್ಕಾರ ಬುಧವಾರ ರಚಿಸಿದೆ.
ಸಂಪುಟ ಸಮಿತಿಗಳ ಸದಸ್ಯರಲ್ಲಿ ಬಿಜೆಪಿ ಮತ್ತು ಅದರ ಎನ್ಡಿಎ ಪಾಲುದಾರರಾದ ಜನತಾ ದಳ (ಯು), ತೆಲುಗು ದೇಶಂ ಪಕ್ಷ, ಜನತಾ ದಳ (ಎಸ್), ಶಿವಸೇನೆ ಮತ್ತು ಲೋಕ ಜನಶಕ್ತಿ (ರಾಮವಿಲಾಸ) ಪಕ್ಷಗಳ ಕೇಂದ್ರ ಸಚಿವರು ಸೇರಿದ್ದಾರೆ.
ಭದ್ರತಾ ಸಂಪುಟ ಸಮಿತಿ: ಪ್ರಧಾನಿ ನರೇಂದ್ರ ಮೋದಿ, ರಕ್ಷಣಾ ಸಚಿವ ರಾಜನಾಥ ಸಿಂಗ್, ಗೃಹ ಸಚಿವ ಅಮಿತ್ ಶಾ, ಹಣಕಾಸು ಸಚಿವ ನಿರ್ಮಲಾ ಸೀತಾರಾಮನ್ ಮತ್ತು ವಿದೇಶಾಂಗ ಸಚಿವ ಎಸ್. ಜೈಶಂಕರ ಅವರನ್ನು ಒಳಗೊಂಡಿದೆ.
ಆರ್ಥಿಕ ವ್ಯವಹಾರಗಳ ಸಂಪುಟ ಸಮಿತಿ : ಪ್ರಧಾನಿ ಮೋದಿ, ರಾಜನಾಥ ಸಿಂಗ್, ಅಮಿತ್ ಶಾ, ನಿರ್ಮಲಾ ಸೀತಾರಾಮನ್, ಎಸ್. ಜೈಶಂಕರ , ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ, ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ, ಭಾರೀ ಕೈಗಾರಿಕೆಗಳು ಮತ್ತು ಉಕ್ಕು ಖಾತೆ ಸಚಿವ ಎಚ್.ಡಿ. ಕುಮಾರಸ್ವಾಮಿ ಸದಸ್ಯರಾಗಿದ್ದಾರೆ. ವಾಣಿಜ್ಯ ಸಚಿವ ಪಿಯೂಷ್ ಗೋಯಲ್, ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಮತ್ತು ಪಂಚಾಯತ್ ರಾಜ್ ಮತ್ತು ಮೀನುಗಾರಿಕೆ ಸಚಿವ ರಾಜೀವ್ ರಂಜನ ಸಿಂಗ್ ಅಲಿಯಾಸ್ ಲಲ್ಲನನ್ ಸಿಂಗ್ ಸಮಿತಿಯಲ್ಲಿರುವ ಇತರ ಸದಸ್ಯರಾಗಿದ್ದಾರೆ.
ರಾಜಕೀಯ ವ್ಯವಹಾರಗಳ ಸಂಪುಟ ಸಮಿತಿ: ಪ್ರಧಾನಿ ಮೋದಿ, ರಾಜನಾಥ ಸಿಂಗ್, ಅಮಿತ್ ಶಾ, ನಿತಿನ್ ಗಡ್ಕರಿ, ನಿರ್ಮಲಾ ಸೀತಾರಾಮನ್, ಪಿಯೂಷ್ ಗೋಯಲ್, ಆರೋಗ್ಯ ಸಚಿವ ಜೆ.ಪಿ. ನಡ್ಡಾ, ನಾಗರಿಕ ವಿಮಾನಯಾನ ಸಚಿವ ಕಿಂಜರಪು ರಾಮಮೋಹನ ನಾಯ್ಡು, ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಉದ್ಯಮಗಳ ಸಚಿವ ಜಿತನ್ ರಾಮ್ ಮಾಂಝಿ, ಬಂದರು ಮತ್ತು ಹಡಗು ಖಾತೆ ಸಚಿವ ಸರ್ಬಾನಂದ ಸೋನೋವಾಲ್, ಪರಿಸರ ಸಚಿವ ಭೂಪೇಂದರ ಯಾದವ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಅನ್ನಪೂರ್ಣ ದೇವಿ, ಸಂಸದೀಯ ವ್ಯವಹಾರಗಳ ಸಚಿವ ಕಿರಣ ರಿಜಿಜು ಮತ್ತು ಕಲ್ಲಿದ್ದಲು ಸಚಿವ ಜಿ ಕಿಶನ್ ರೆಡ್ಡಿ ಇದ್ದಾರೆ.
ಸಂಸದೀಯ ವ್ಯವಹಾರಗಳ ಸಂಪುಟ ಸಮಿತಿ: ರಾಜನಾಥ್ ಸಿಂಗ್, ಅಮಿತ್ ಶಾ, ಜೆ.ಪಿ. ನಡ್ಡಾ, ನಿರ್ಮಲಾ ಸೀತಾರಾಮನ್, ರಾಜೀವ ರಂಜನ್ ಸಿಂಗ್, ಕಿಂಜರಪು ರಾಮಮೋಹನ ನಾಯ್ಡು, ಕಿರಣ ರಿಜಿಜು, ಸಾಮಾಜಿಕ ನ್ಯಾಯ ಸಚಿವ ವೀರೇಂದ್ರ ಕುಮಾರ, ಬುಡಕಟ್ಟು ವ್ಯವಹಾರಗಳ ಸಚಿವ ಜುಯಲ್ ಓರಂ ಮತ್ತು ಜಲಶಕ್ತಿ ಸಚಿವ ಸಿ ಆರ್ ಪಾಟೀಲ್ ಅವರನ್ನು ಒಳಗೊಂಡಿದೆ. ಕೇಂದ್ರ ಕಾನೂನು ರಾಜ್ಯ ಸಚಿವ (ಸ್ವತಂತ್ರ ಉಸ್ತುವಾರಿ) ಅರ್ಜುನ ರಾಮ ಮೇಘವಾಲ್ ಮತ್ತು ಕಾನೂನು ರಾಜ್ಯ ಸಚಿವ ಎಲ್ ಮುರುಗನ್ ಸಮಿತಿಯ ವಿಶೇಷ ಆಹ್ವಾನಿತರಾಗಿದ್ದಾರೆ.
ಕ್ಯಾಬಿನೆಟ್ನ ನೇಮಕಾತಿ ಸಮಿತಿ: ಹಿಂದಿನ ವರ್ಷಗಳಂತೆ ಪ್ರಧಾನಿ ಮೋದಿ ಮತ್ತು ಶಾ. ಕೇವಲ ಇಬ್ಬರು ಸದಸ್ಯರನ್ನು ಒಳಗೊಂಡಿರುತ್ತದೆ.
ಹೂಡಿಕೆ ಮತ್ತು ಪ್ರಗತಿ ಸಮಿತಿ: ಪ್ರಧಾನಿ ಮೋದಿ, ರಾಜನಾಥ ಸಿಂಗ್, ಅಮಿತ್ ಶಾ, ನಿತಿನ್ ಗಡ್ಕರಿ, ನಿರ್ಮಲಾ ಸೀತಾರಾಮನ್, ಪಿಯೂಷ್ ಗೋಯಲ್, ಗ್ರಾಹಕ ವ್ಯವಹಾರಗಳ ಸಚಿವ ಪ್ರಲ್ಹಾದ ಜೋಶಿ, ಜವಳಿ ಸಚಿವ ಗಿರಿರಾಜ್ ಸಿಂಗ್, ರೈಲ್ವೆ ಸಚಿವ ಅಶ್ವಿನಿ ವೈಷ್ಣವ, ಸಂಪರ್ಕ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ, ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಖಾತೆ ಸಚಿವ ಹರ್ದೀಪ್ ಸಿಂಗ್ ಮತ್ತು ಆಹಾರ ಸಂಸ್ಕರಣಾ ಕೈಗಾರಿಕೆಗಳ ಸಚಿವ ಚಿರಾಗ್ ಪಾಸ್ವಾನ್ ಇದ್ದಾರೆ.
ಅಂಕಿಅಂಶಗಳ ಖಾರತೆ ರಾಜ್ಯ ಸಚಿವ ರಾವ್ ಇಂದರಜಿತ್ ಸಿಂಗ್ ಮತ್ತು ಆಯುಷ್ ಸಚಿವ ಪ್ರತಾಪ ರಾವ್ ಜಾಧವ್ ವಿಶೇಷ ಆಹ್ವಾನಿತರಾಗಿದ್ದಾರೆ.
ವಸತಿ ಸಚಿವ ಸಂಪುಟ ಸಮಿತಿ: ಅಮಿತ್ ಶಾ, ನಿತಿನ್ ಗಡ್ಕರಿ, ನಿರ್ಮಲಾ ಸೀತಾರಾಮನ್, ಪಿಯೂಷ್ ಗೋಯಲ್ ಮತ್ತು ವಸತಿ ಮತ್ತು ನಗರ ವ್ಯವಹಾರಗಳ ಸಚಿವ ಮನೋಹರ ಲಾಲ್ ಖಟ್ಟರ್ ಸದಸ್ಯರಾಗಿದ್ದಾರೆ. ಕೇಂದ್ರ ಸಿಬ್ಬಂದಿ ಮತ್ತು ಪಿಎಂಒ ಖಾತೆ ರಾಜ್ಯ ಸಚಿವ ಜಿತೇಂದ್ರ ಸಿಂಗ್ ಸಮಿತಿಯಲ್ಲಿ ವಿಶೇಷ ಆಹ್ವಾನಿತರಾಗಿದ್ದಾರೆ.
ಕೌಶಲ್ಯ, ಉದ್ಯೋಗ ಮತ್ತು ಜೀವನೋಪಾಯದ ಕ್ಯಾಬಿನೆಟ್ ಸಮಿತಿ: ಪ್ರಧಾನಿ ಮೋದಿ, ರಾಜನಾಥ್ ಸಿಂಗ್, ಅಮಿತ್ ಶಾ, ನಿತಿನ್ ಗಡ್ಕರಿ, ನಿರ್ಮಲಾ ಸೀತಾರಾಮನ್, ಅಶ್ವಿನಿ ವೈಷ್ಣವ್, ಧರ್ಮೇಂದ್ರ ಪ್ರಧಾನ, ಭೂಪೇಂದ್ರ ಯಾದವ್, ಹರ್ದೀಪ್ ಸಿಂಗ್ ಪುರಿ, ಸಂಸ್ಕೃತಿ ಖಾತೆ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಮತ್ತು ಉದ್ಯೋಗ ಸಚಿವ ಮನ್ಸುಖ್ ಮಾಂಡವಿಯಾ ಇದ್ದಾರೆ. ಕೇಂದ್ರ ಕೌಶಲ್ಯಾಭಿವೃದ್ಧಿ ರಾಜ್ಯ ಸಚಿವ ಜಯಂತ್ ಚೌಧರಿ ವಿಶೇಷ ಆಹ್ವಾನಿತರಾಗಿದ್ದಾರೆ.