ಬೆಂಗಳೂರು: ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರಿಗೆ ಅಶ್ಲೀಲ ಪದಗಳನ್ನು ಬಳಸಿ ನಿಂದಿಸಿದ ಆರೋಪದ ಮೇಲೆ ಬಂಧನಕ್ಕೊಳಗಾಗಿದ್ದ ಬಿಜೆಪಿ ವಿಧಾನಪರಿಷತ್ ಸದಸ್ಯ ಸಿ.ಟಿ. ರವಿ ಅವರಿಗೆ ಇದೀಗ ರಾಜ್ಯ ಉಚ್ಚ ನ್ಯಾಯಾಲಯ ಬಿಗ್ ರಿಲೀಸ್ ನೀಡಿದೆ. ಅವರನ್ನು ತಕ್ಷಣ ಬಿಡುಗಡೆಗೊಳಿಸಬೇಕು ಎಂದು ನ್ಯಾಯಾಲಯ ಆದೇಶ ಹೊರಡಿಸಿದೆ.
ಸಚಿವೆ ಲಕ್ಷ್ಮಿ ಹೆಬ್ಬಾಳ್ಳರ ಅವರಿಗೆ ಮಾನಹಾನಿ ಮಾಡಿರುವ ಆರೋಪದಲ್ಲಿ ಬಂಧನಕ್ಕೆ ಒಳಗಾಗಿದ್ದ ವಿಧಾನ ಪರಿಷತ್ ಸದಸ್ಯ ಸಿ.ಟಿ. ರವಿ ಅವರನ್ನು ತಕ್ಷಣವೇ ಎಲ್ಲಿದ್ದಾರೋ ಅಲ್ಲಿಂದಲೇ ಬಿಡುಗಡೆ ಮಾಡುವಂತೆ ಹೈಕೋರ್ಟ್ ಏಕಸದಸ್ಯ ನ್ಯಾಯಪೀಠದ ನ್ಯಾಯಮೂರ್ತಿ ಎಂ.ಜಿ.ಉಮಾ ಅವರು ಆದೇಶ ಹೊರಡಿಸಿದ್ದಾರೆ.