ಬೆಳಗಾವಿ : ಖಾನಾಪುರ ಪಟ್ಟಣ ಪಂಚಾಯಿತಿ ಚುನಾವಣೆಗೆ ಹೈಕೋರ್ಟ್ ಇದೀಗ ತಡೆ ನೀಡಿದೆ. ಆಗಸ್ಟ್ 26ರಂದು ಚುನಾವಣೆ ನಿಗದಿಯಾಗಿತ್ತು. ಅಧ್ಯಕ್ಷರು ಮತ್ತು ಉಪಾಧ್ಯಕ್ಷರ ಎರಡು ಸ್ಥಾನಗಳು ಸಾಮಾನ್ಯ ಮಹಿಳೆಗೆ ಮೀಸಲಾಗಿತ್ತು. ಈ ನಿಟ್ಟಿನಲ್ಲಿ ಖಾನಾಪುರ ಕಾಂಗ್ರೆಸ್ ಸದಸ್ಯ ಲಕ್ಷ್ಮಣ ಮಾದರ ನ್ಯಾಯಾಲಯದ ಮೆಟ್ಟಿಲು ಏರಿದ್ದರು. ಮುಂದಿನ ವಿಚಾರಣೆ ಆಗಸ್ಟ್ 29ರಂದು ನಡೆಯಲಿದೆ ಎಂದು ಲಕ್ಷ್ಮಣ ಮಾದರ ತಿಳಿಸಿದ್ದಾರೆ. ಕಳೆದ ಕೆಲವು ವರ್ಷಗಳಿಂದ ಖಾನಾಪುರ ಪಟ್ಟಣ ಪಂಚಾಯಿತಿ ಅಧ್ಯಕ್ಷ ಸ್ಥಾನ ಎಸ್ಸಿ ವರ್ಗಕ್ಕೆ ಮೀಸಲಿಟ್ಟಿಲ್ಲ. ಇದರಿಂದ ಅವರು ನ್ಯಾಯಾಲಯದ ಮೆಟ್ಟಿಲೇರಿದ್ದರು.
ಖಾನಾಪುರ ಪಟ್ಟಣ ಪಂಚಾಯಿತಿ ಚುನಾವಣೆಗೆ ತಡೆ ನೀಡಿದ ಹೈಕೋರ್ಟ್
