ಸಂಕೇಶ್ವರ : ಇಲ್ಲಿನ ಶ್ರೀ ಹಿರಣ್ಯಕೇಶಿ ಸಹಕಾರಿ ಸಕ್ಕರೆ ಕಾರ್ಖಾನೆಯ ಅಧ್ಯಕ್ಷರಾಗಿ ಬಸವರಾಜ ಕಲ್ಲಟ್ಟಿ ಹಾಗೂ ಉಪಾಧ್ಯಕ್ಷರಾಗಿ ಅಶೋಕ ಪಟ್ಟಣಶೆಟ್ಟಿ ಅವಿರೋಧ ಆಯ್ಕೆಯಾಗಿದ್ದಾರೆ.
ಸಕ್ಕರೆ ಕಾರ್ಖಾನೆಯ ಸಭಾಗೃಹದಲ್ಲಿ ಮಂಗಳವಾರ ಬೆಳಿಗ್ಗೆ ಸಭೆ ಸೇರಿದ್ದ ಸದಸ್ಯರು ಬಸವರಾಜ ಕಲ್ಲಟ್ಟಿ ಅವರನ್ನು ಅಧ್ಯಕ್ಷರಾಗಿ ಹಾಗೂ ಉಪಾಧ್ಯಕ್ಷರನ್ನಾಗಿ ಅಶೋಕ ಪಟ್ಟಣಶೆಟ್ಟಿ ಅವರನ್ನು ಅವಿರೋಧವಾಗಿ ಆಯ್ಕೆ ಮಾಡಿದರು. ಆದರೆ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ ಸಂದರ್ಭದಲ್ಲಿ ನಿರ್ಗಮಿತ ಅಧ್ಯಕ್ಷ ನಿಖಿಲ್ ಕತ್ತಿ ದೂರ ಉಳಿದಿದ್ದರು.