ಪ್ರಯಾಗ್ ರಾಜ್ : ಪ್ರಯಾಗ್ ರಾಜ್ ನ ಮಹಾ ಕುಂಭಮೇಳದಲ್ಲಿ ಇದುವರೆಗೆ 60 ಕೋಟಿ ಭಕ್ತರು ತ್ರಿವೇಣಿ ಸಂಗಮದಲ್ಲಿ ಪವಿತ್ರ ಸ್ನಾನ ಮಾಡಿದ್ದಾರೆ ಎಂದು ಉತ್ತರ ಪ್ರದೇಶ ಸರ್ಕಾರ ಶನಿವಾರ ತಿಳಿಸಿದೆ.
ಪ್ರಯಾಗ್ ರಾಜ್ ನ ಮಹಾ ಕುಂಭಮೇಳದಲ್ಲಿ ಇದುವರೆಗೆ 60 ಕೋಟಿ ಭಕ್ತರು ತ್ರಿವೇಣಿ ಸಂಗಮದಲ್ಲಿ ಪವಿತ್ರ ಸ್ನಾನ ಮಾಡಿದ್ದಾರೆ ಎಂದು ಉತ್ತರ ಪ್ರದೇಶ ಸರ್ಕಾರ ಶನಿವಾರ ತಿಳಿಸಿದೆ.
ಜನವರಿ 13 ರಂದು ಪ್ರಾರಂಭವಾದ ಕುಂಭಮೇಳಕ್ಕೆ ಫೆಬ್ರವರಿ 26 ರಂದು ಮಹಾ ಶಿವರಾತ್ರಿಯಂದು ತೆರೆ ಬೀಳಲಿದೆ. ಈ ಹಿನ್ನೆಲೆಯಲ್ಲಿ ಪ್ರಯಾಗರಾಜ್ ಗೆ ಭಕ್ತರ ದಂಡೇ ಹರಿದು ಬರುತ್ತಿದೆ.
ಭಾರತದ 110 ಕೋಟಿ ಸನಾತನ ಅನುಯಾಯಿಗಳಲ್ಲಿ ಅರ್ಧಕ್ಕಿಂತ ಹೆಚ್ಚು ಜನರು ಪವಿತ್ರ ಸಂಗಮದಲ್ಲಿ ಸ್ನಾನ ಮಾಡಿದ್ದಾರೆ ಮತ್ತು ಫೆಬ್ರವರಿ 26 ರಂದು ನಡೆಯುವ ಅಂತಿಮ ‘ಅಮೃತ ಸ್ನಾನ’ದ ವೇಳೆಗೆ ಈ ಸಂಖ್ಯೆ 65 ಕೋಟಿಯನ್ನು ಮೀರುವ ನಿರೀಕ್ಷೆಯಿದೆ ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ.
ಈ ಮಹಾ ಕುಂಭವು ಯಾವುದೇ ಧಾರ್ಮಿಕ, ಸಾಂಸ್ಕೃತಿಕ ಅಥವಾ ಸಾಮಾಜಿಕ ಕಾರ್ಯಕ್ರಮದಲ್ಲಿ ಅತಿ ಹೆಚ್ಚು ಜನರ ಭಾಗವಹಿಸುವಿಕೆಯನ್ನು ದಾಖಲಿಸಿದೆ ಎಂದು ಉತ್ತರ ಪ್ರದೇಶ ಹೇಳಿದೆ.