ಹುಬ್ಬಳ್ಳಿ: ಹುಬ್ಬಳ್ಳಿ- ಧಾರವಾಡ ಮಹಾನಗರ ಪಾಲಿಕೆಯ ಮೇಯರ್ ಆಗಿ ಜ್ಯೋತಿ ಪಾಟೀಲ ಆಯ್ಕೆಯಾಗಿದ್ದಾರೆ. ಹಾಗೂ ಉಪಮೇಯರ್ ಆಗಿ ಸಂತೋಷ ಚವ್ಹಾಣ ಆಯ್ಕೆಯಾಗಿದ್ದಾರೆ.
ಪಾಲಿಕೆಯ ಹುಬ್ಬಳ್ಳಿಯ ಸಭಾಭವನದಲ್ಲಿ ಮೇಯರ್, ಉಪಮೇಯರ್ ಆಯ್ಕೆಗೆ ಸೋಮವಾರ ಚುನಾವಣೆ ನಡೆಯಿತು. ಅಧಿಸೂಚನೆ ಪ್ರಕಾರ ಮೇಯರ್ ಸ್ಥಾನ ಸಾಮಾನ್ಯ ಮಹಿಳೆ ಮತ್ತು ಉಪ ಮೇಯರ್ ಸ್ಥಾನ ಹಿಂದುಳಿದ ವರ್ಗ ‘ಬ’ಗೆ ಮೀಸಲಾಗಿತ್ತು.
ಬಿಜೆಪಿಯ ಜ್ಯೋತಿ ಪಾಟೀಲ 47 ಮತಗಳನ್ನು ಪಡೆದರೆ, ಪ್ರತಿಸ್ಪರ್ಧಿ ಕಾಂಗ್ರೆಸ್ ನ ಹುಬ್ಬಳ್ಳಿಯ ಸುವರ್ಣಾ ಕಲ್ಲಕುಂಟ್ಲ (ವಾರ್ಡ್ 59) 37 ಮತಗಳನ್ನು ಪಡೆದರು.
ಎಐಎಂಐಎಂನಿಂದ ಸ್ಪರ್ಧಿಸಿದ್ದ ವಾರ್ಡ್ 76ರ ಸದಸ್ಯೆ ವಹಿದಾಖಾನಂ ಕಿತ್ತೂರು 3 ಮತಗಳನ್ನು ಪಡೆದರು.
ಉಪಮೇಯರ್ ಸ್ಥಾನಕ್ಕೆ ಸ್ಪರ್ಧಿಸಿದ್ದ ಬಿಜೆಪಿಯ ಸಂತೋಷ್ ಚವ್ವಾಣ್ 47 ಮತಗಳನ್ನು ಪಡೆದರೆ, ಕಾಂಗ್ರೆಸ್ ನ ಧಾರವಾಡದ ಶಂಭುಗೌಡ ಸಾಲಮನಿ (ವಾರ್ಡ್ 14) ಅವರು 37 ಮತಗಳನ್ನು ಪಡೆದರು.
ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಯಲ್ಲಿ ಪಾಲಿಕೆ ಸದಸ್ಯರು, ಲೋಕಸಭಾ ಸದಸ್ಯರು, ಶಾಸಕರು ಮತ್ತು ವಿಧಾನ ಪರಿಷತ್ತು ಸದಸ್ಯರು ಸೇರಿ ಒಟ್ಟು 90 ಜನ ಮತದಾರರು ಇದ್ದು, ಇಂದು, ಸೋಮವಾರ ನಡೆದ ಮೇಯರ್ ಹಾಗೂ ಉಪಮೇಯರ್ ಚುನಾವಣೆಯಲ್ಲಿ ಇವರಲ್ಲಿ 87 ಜನರು ಪಾಲ್ಗೊಂಡಿದ್ದರು. ಮೇಯರ್ ಸ್ಥಾನ ಸಾಮಾನ್ಯ ಮಹಿಳೆ ಹಾಗೂ ಉಪಮೇಯರ್ ಸ್ಥಾನ ಹಿಂದುಳಿದ ವರ್ಗ ʼಬಿʼ ಕ್ಕೆ ಮೀಸಲಾಗಿತ್ತು.
ಮಹಾನಗರ ಪಾಲಿಕೆಯ 24ನೇ ಅವಧಿಗೆ ಮೇಯರ್ ಆಗಿ 19ನೇ ವಾರ್ಡ್ ಸದಸ್ಯರಾದ ಜ್ಯೋತಿ ಪಾಟೀಲ 47 ಮತಗಳನ್ನು ಪಡೆದು ಆಯ್ಕೆಯಾದರು. 49ನೇ ವಾರ್ಡ್ ಸದಸ್ಯೆಯರಾದ ಸಂತೋಷ ಚವ್ಹಾಣ 47 ಮತಗಳನ್ನು ಪಡೆದು ಉಪ ಮೇಯರ್ ಆಗಿ ಆಯ್ಕೆಯಾದರು.
ಮೇಯರ್ ಸ್ಥಾನಕ್ಕೆ ಸ್ಪರ್ಧಿಸಿದ್ದ 59ನೇ ವಾರ್ಡ್ ಕಾಂಗ್ರೆಸ್ ಸದಸ್ಯರಾದ ಸುವರ್ಣ ಕಲಕುಂಟ್ಲ 37 ಹಾಗೂ 76 ನೇ ವಾರ್ಡ ಸದಸ್ಯರಾದ ವಹೀದಾ ಖಾನಂ ಅಲ್ಲಾಭಕ್ಷ ಕಿತ್ತೂರು 3 ಮತಗಳನ್ನು ಪಡೆದರು. ಉಪಮೇಯರ್ ಸ್ಥಾನಕ್ಕೆ 14ನೇ ವಾರ್ಡ್ ಕಾಂಗ್ರೆಸ್ ಸದಸ್ಯರಾದ ಶಂಭುಗೌಡ ರುದ್ರಗೌಡ ಸಾಲಮನಿ 37 ಮತಗಳನ್ನು ಪಡೆದರು. ಮಹಾಪೌರ ಮತ್ತು ಉಪ ಮಹಾಪೌರ ಚುನಾವಣೆಯಲ್ಲಿ ಸದಸ್ಯರು ಕೈ ಎತ್ತುವ ಮೂಲಕ ತಮ್ಮ ಮತ ಚಲಾಯಿಸಿದರು. ಪಾಲಿಕೆಯ 24ನೇ ಅವಧಿಗೆ ಮಹಾಪೌರರಾಗಿ ಜ್ಯೋತಿ ಪಾಟೀಲ ಹಾಗೂ ಉಪಮಹಾಪೌರರಾಗಿ ಸಂತೋಷ ಚವ್ಹಾಣ ಆಯ್ಕೆಯಾಗಿದ್ದಾರೆ.