ಬೆಳಗಾವಿ :
ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ನೀಡುವಂತೆ ಒತ್ತಾಯಿಸಿ ಅಕ್ಟೋಬರ್ 21 ರಂದು ಹುಕ್ಕೇರಿಯಲ್ಲಿ ಪಂಚಮಸಾಲಿ ಮೀಸಲು ಹೋರಾಟ ಸಮಿತಿ ವತಿಯಿಂದ ಸಮಾವೇಶ ನಡೆಯುತ್ತಿದೆ. ಇದು ಮುಂದಿನ ಹುಕ್ಕೇರಿ ವಿಧಾನಸಭಾ ಚುನಾವಣೆ ಮೇಲೆ ಕಣ್ಣಿಟ್ಟಿದೆ ಎನ್ನಲಾಗುತ್ತಿದೆ. ಈ ಕಾರಣಕ್ಕಾಗಿ ಹುಕ್ಕೇರಿಯಲ್ಲಿ ನಿರ್ಣಾಯಕವಾಗಿ
ಪಂಚಮಸಾಲಿ ಸಮುದಾಯದ ಸಮಾವೇಶ ಆಯೋಜನೆಗೊಳ್ಳುತ್ತಿದೆ.
ಕೆಲ ದಿನಗಳ ಹಿಂದಷ್ಟೇ ಅರಬಾವಿ ಮತಕ್ಷೇತ್ರದಲ್ಲಿ ಪಂಚಮಸಾಲಿ ಸಮುದಾಯದ ಸಮಾವೇಶ ಹಮ್ಮಿಕೊಳ್ಳಲಾಗಿತ್ತು. ಇದೀಗ ಹುಕ್ಕೇರಿಯಲ್ಲಿ ಸಮಾವೇಶ ನಡೆಸುತ್ತಿರುವುದು ಭಾರಿ ಸಂಚಲನಕ್ಕೆ ಕಾರಣವಾಗಿದೆ. ಹುಕ್ಕೇರಿ ಮತಕ್ಷೇತ್ರ ಪ್ರತಿನಿಧಿಸುತ್ತಿದ್ದ ಶಾಸಕ ಉಮೇಶ ಕತ್ತಿ ತಿಂಗಳ ಹಿಂದೆಷ್ಟೇ ನಿಧನರಾಗಿದ್ದರು. ಈ ಹಿನ್ನೆಲೆಯಲ್ಲಿ ಮುಂದಿನ ದಿನಗಳಲ್ಲಿ ನಡೆಯಲಿರುವ ವಿಧಾನಸಭೆ ಚುನಾವಣೆ ಮೇಲೆ ಕಣ್ಣಿಟ್ಟೇ ಇಲ್ಲಿ ನಿರ್ಣಾಯಕ ಸಮಾವೇಶ ಏರ್ಪಡಿಸಲಾಗುತ್ತಿದೆ. ಜಿಲ್ಲೆಯಲ್ಲಿ ಅರಬಾವಿ ಮತಕ್ಷೇತ್ರದಲ್ಲಿ ಕೆಲ ದಿನಗಳ ಹಿಂದೆ ತಿಂಗಳ ಹಿಂದೆ ಪಂಚಮಸಾಲಿ ಸಮಾವೇಶ ನಡೆದಿದ್ದರೂ ಇದೀಗ ಹುಕ್ಕೇರಿಯಲ್ಲಿ ನಡೆಯುವ ಸಮಾವೇಶ ಭಾರೀ ಚರ್ಚೆಯನ್ನು ಹುಟ್ಟುಹಾಕಿದೆ.
ತೆರೆಯ ಮರೆಗೆ ಸರಿದಿರುವ
ಮಾಜಿ ಸಚಿವ ಎ.ಬಿ. ಪಾಟೀಲ್ ಮತ್ತು ಮಾಜಿ ಸಚಿವ ಶಶಿಕಾಂತ ನಾಯಕ ಅವರನ್ನು ಬರುವ ದಿನಗಳಲ್ಲಿ ರಾಜಕೀಯವಾಗಿ ಇನ್ನಷ್ಟು ಪ್ರಬಲರನ್ನಾಗಿ ಮಾಡುವ ಜಿಲ್ಲೆಯ 18 ವಿಧಾನಸಭಾ ಮತಕ್ಷೇತ್ರಗಳ ಪೈಕಿ ಮುಂದಿನ ಬಾರಿ ಕನಿಷ್ಠ 10 ಕ್ಷೇತ್ರಗಳಲ್ಲಿ ಪಂಚಮಸಾಲಿ ಸಮುದಾಯದವರು ಗೆಲ್ಲಲೇಬೇಕು ಎಂಬ ಹಿಡನ್ ಅಜೆಂಡಾ ಈ ಸಮಾವೇಶಗಳ ಹಿಂದಿದೆ ಎಂದು ತಿಳಿದುಬಂದಿದೆ. ಒಟ್ಟಾರೆ ಇದೀಗ ವಿವಿಧ ಕಡೆಗಳಲ್ಲಿ ನಡೆಯುತ್ತಿರುವ ಪಂಚಮಸಾಲಿ ಮೀಸಲಾತಿ ಹೋರಾಟ ಸಮಾವೇಶ ಭಾರಿ ಚರ್ಚೆಗೆ ಗ್ರಾಸವಾಗುತ್ತಿದೆ.