ಬೆಳಗಾವಿ :
ರಸ್ತೆ ಅಪಘಾತದಲ್ಲಿ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿರುವ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಬೇಗ ಗುಣಮಖರಾಗಲಿ ಎಂದು ಬೆಳಗಾವಿ ಹುಕ್ಕೇರಿ ಹಿರೇಮಠದ ಶ್ರೀ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ ಆಶೀರ್ವದಿಸಿದ್ದಾರೆ.
ಬುಧವಾರ ಖಾಸಗಿ ಆಸ್ಪತ್ರೆಗೆ ತೆರಳಿ ಸಚಿವರ ಆರೋಗ್ಯ ವಿಚಾರಿಸಿದ ಸ್ವಾಮೀಜಿ ಸಚಿವರು ಗುಣಮುಖರಾಗುತ್ತಿದ್ದಾರೆ. ಶೀಘ್ರದಲ್ಲೇ ಸಾರ್ವಜನಿಕರ ಸೇವೆಗೆ ಅಣಿಯಾಗಲಿ ಎಂದು ಹಾರೈಸಿದರು.
ಹೆಬ್ಬಾಳ್ಕರ್ ಆರೋಗ್ಯ ವಿಚಾರಿಸಿದ ಹುಕ್ಕೇರಿ ಸ್ವಾಮೀಜಿ
