ಮಂಗಳೂರು : ದಕ್ಷಿಣ ಕನ್ನಡದ ಮಂಗಳೂರಿನ ವೈದ್ಯೆಯೊಬ್ಬರು ದೇಶ ವಿರೋಧಿ ಪೋಸ್ಟ್ ಹಾಕಿದ್ದ ಹಿನ್ನೆಲೆಯಲ್ಲಿ ಮಂಗಳೂರು ಹೈಲ್ಯಾಂಡ್ ಆಸ್ಪತ್ರೆಯ ಹೆಚ್ಆರ್ ಆಕೆಯ ವಿರುದ್ಧ ಪಾಂಡೇಶ್ವರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ ಹಾಗೂ ಹೈಲ್ಯಾಂಡ್ ಆಸ್ಪತ್ರೆ ಆಕೆಯನ್ನು ವಜಾಗೊಳಿಸಿದೆ ಎಂದು ತಿಳಿದುಬಂದಿದೆ.
ಮಂಗಳೂರಿನ ವೈದ್ಯೆ ಅಫೀಫಾ ಫಾತಿಮಾ ಎಂಬಾಕೆ ದೇಶ ವಿರೋಧಿ ಪೋಸ್ಟ್ ಹಾಕಿದ್ದು, ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ ವ್ಯಕ್ತವಾಗುತ್ತಿದೆ. ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಡಯೆಟಿಷಿಯನ್ ಆಗಿ ಅಫೀಫ ಫಾರೀಮಾ, ಸೋಷಿಯಲ್ ಮೀಡಿಯಾದಲ್ಲಿ ವಿವಾದಾತ್ಮಕ ಪೋಸ್ಟ್ ಹಾಕಿದ್ದರು. ‘help stinky hindus are behind me’ (ಕಾಪಾಡಿ, ಕೊಳಕು ಹಿಂದೂಗಳು ನನ್ನ ಹಿಂದೆ ಬಿದ್ದಿದ್ದಾರೆ). am i indian? yes. do i hate india? yes (ಹೌದು, ನಾನು ಭಾರತೀಯಳು.. ಹೌದು ನಾನು ಭಾರತವನ್ನು ದ್ವೇಷಿಸುತ್ತೇನೆ) ಎಂದು ಸಾಮಾಜಿಕ ಮಾಧ್ಯಮದಲ್ಲಿ ಬರೆದುಕೊಂಡಿದ್ದಳು.
ಪಹಲ್ಗಾಮ್ ದಾಳಿ ನಂತರ ಭಾರತ ಹಾಗೂ ಪಾಕಿಸ್ತಾನ ಮಧ್ಯೆ ಉದ್ವಿಗ್ನ ಪರಿಸ್ಥಿತಿ ಇರುವ ಸಂದರ್ಭದಲ್ಲಿಯೇ ವೈದ್ಯೆ ಈ ರೀತಿ ಪೋಸ್ಟ್ ಮಾಡಿರುವುದಕ್ಕೆ ತೀವ್ರ ವಿರೋಧ ವ್ಯಕ್ತವಾಗಿದೆ. ಮಂಗಳೂರಿನ ಹೈಲ್ಯಾಂಡ್ ಆಸ್ಪತ್ರೆ ವೈದ್ಯೆ ಅಫೀಫ ಫಾತಿಮಾ ಎಂಬಾಕೆ ದೇಶ ವಿರೋಧಿ ಸಂದೇಶ ಪ್ರಕಟಿಸಿದ್ದು, ಸದ್ಯ ಆಕೆಯ ವಿರುದ್ಧ ಮಂಗಳೂರು ನಗರದ ಪಾಂಡೇಶ್ವರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಿಸಲಾಗಿದೆ. ಹೈಲ್ಯಾಂಡ್ ಆಸ್ಪತ್ರೆ ಹೆಚ್ಆರ್ ಮೊಹಮ್ಮದ್ ಅಸ್ಲಾಂ ದೂರು ಆಧರಿಸಿ ಬಿಎನ್ಎಸ್ ಕಲಂ 196(1)(a), 353(2) ಅಡಿಯಲ್ಲಿ ಎಫ್ಐಆರ್ ದಾಖಲಿಸಲಾಗಿದೆ ಎಂದು ಹೇಳಲಾಗಿದೆ. ವಿವಾದಾತ್ಮಕ ಪೋಸ್ಟ್ ವಿರುದ್ಧ ಭಾರೀ ಆಕ್ರೋಶ ಭುಗಿಲೇಳುತ್ತಿದ್ದಂತೆ ಆಸ್ಪತ್ರೆಯ ಆಡಳಿತ ಮಂಡಳಿ, ಅಫೀಫಳನ್ನು ಕೆಲಸದಿಂದ ವಜಾ ಮಾಡಿದೆ ಎಂದು ವರದಿಯಾಗಿದೆ.