ದೆಹಲಿ:
ಈಗಲೇ ಲೋಕಸಭೆ ಚುನಾವಣೆಯಲ್ಲಿ ಕರ್ನಾಟಕದ 28 ಲೋಕಸಭಾ ಸ್ಥಾನಗಳಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿಯ ಎನ್ಡಿಎ 24 ಸ್ಥಾನಗಳನ್ನು ಗಳಿಸುವ ನಿರೀಕ್ಷೆಯಿದೆ ಎಂದು ಖಾಸಗಿ ಸುದ್ದಿವಾಹಿನಿ ಇಂಡಿಯಾ ಟುಡೇ ‘ಮೂಡ್ ಆಫ್ ದಿ ನೇಷನ್ ಸಮೀಕ್ಷೆ’ ತಿಳಿಸಿದೆ.
ರಾಜ್ಯದ ಲೋಕಸಭಾ ಕ್ಷೇತ್ರಗಳಲ್ಲಿ 2023 ಡಿಸೆಂಬರ್ 15 ರಿಂದ 2024 ಜನವರಿ 28 ರ ನಡುವೆ ನಡೆಸಿದ ಚುನಾವಣಾ ಪೂರ್ವ ಸಮೀಕ್ಷೆಯನ್ನು ಮೂಡ್ ಆಫ್ ದಿ ನೇಷನ್ ಬಿಡುಗಡೆ ಮಾಡಿದೆ.
ಕರ್ನಾಟಕದಲ್ಲಿ ಬಿಜೆಪಿ+ ಜೆಡಿಎಸ್ – 24 ಸ್ಥಾನಗಳಲ್ಲಿ(ಶೇ. 53 ಮತಗಳು) ಜಯಗಳಿಸುವ ಸಾಧ್ಯತೆಯಿದೆ. ಹಾಗೂ ಆಡಳಿತಾರೂಢ ಕಾಂಗ್ರೆಸ್
4 ಸ್ಥಾನಗಳಲ್ಲಿ (ಶೇ.42ರಷ್ಟು ಮತಗಳು) ಜಯಗಳಿಸುವ ಸಾಧ್ಯತೆಯಿದೆ ಎಂದು ಸಮೀಕ್ಷೆ ಹೇಳಿದೆ.
2019 ರಂತೆಯೇ ಬಿಜೆಪಿಯು ಶೇಕಡಾ 53 ರಷ್ಟು ಮತಗಳನ್ನು ಗಳಿಸುವ ನಿರೀಕ್ಷೆಯಿದೆ. ವಿಪಕ್ಷಗಳ ಮೈತ್ರಿಕೂಡ ಇಂಡಿಯಾ-ಬ್ಲಾಕ್ 2019 ರಂತೆಯೇ ಶೇಕಡಾ 42 ರಷ್ಟು ಮತಗಳನ್ನು ಪಡೆಯುವ ನಿರೀಕ್ಷೆಯಿದೆ ಎಂದು ಸಮೀಕ್ಷೆ ತಿಳಿಸಿದೆ.
2019 ರ ಲೋಕಸಭೆ ಚುನಾವಣೆಯಲ್ಲಿ ಕರ್ನಾಟಕದಲ್ಲಿ 28 ಕ್ಷೇತ್ರಗಳಲ್ಲಿ ಬಿಜೆಪಿ 25 ಸ್ಥಾನಗಳಲ್ಲಿ ಜಯಗಳಿಸಿತ್ತು. ಕಾಂಗ್ರೆಸ್ ಕೇವಲ ಒಂದು ಸ್ಥಾನಗಳಲ್ಲಿ ಮಾತ್ರ ಜಯಗಳಿಸಿತ್ತು. ಜೆಡಿಎಸ್ ಒಂದು ಸ್ಥಾನ ಹಾಗೂ ಸ್ವತಂತ್ರ ಅಭ್ಯರ್ಥಿಯಾಗಿ ಮಂಡ್ಯದಲ್ಲಿ ಸುಮಲತಾ ಗೆಲುವು ಸಾಧಿಸಿದ್ದರು.
ಈಗಲೇ ಲೋಕಸಭೆ ಚುನಾವಣೆ ನಡೆದರೆ ಕರ್ನಾಟಕದಲ್ಲಿ ಬಿಜೆಪಿ – ಜೆಡಿಎಸ್ ಮೈತ್ರಿ 24 ಸ್ಥಾನಗಳಲ್ಲಿ ಗೆಲ್ಲಬಹುದು.; ಮೂಡ್ ಆಫ್ ದಿ ನೇಷನ್ ಸಮೀಕ್ಷೆ
