ಬೆಂಗಳೂರು :
ಸರಕಾರಿ ನೌಕರರಿಗೆ ಹಳೆ ಪಿಂಚಣಿ ಯೋಜನೆ ಮಾಡುವ ವಿಚಾರ ಕಾಂಗ್ರೆಸ್ ಪಕ್ಷದ ಚುನಾವಣಾ ಪ್ರಣಾಳಿಕೆಯಲ್ಲಿ ಇರಲಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಸುಳಿವು ನೀಡಿದ್ದಾರೆ.
ಎರಡು ದಿನದಲ್ಲಿ ಕಾಂಗ್ರೆಸ್ ಪಕ್ಷದ ಪ್ರಣಾಳಿಕೆ ಬಿಡುಗಡೆ ಮಾಡಲಾಗುತ್ತದೆ. ಕಿತ್ತೂರು ಕರ್ನಾಟಕ, ಕಲ್ಯಾಣ ಕರ್ನಾಟಕ, ಕರಾವಳಿ, ಮಲೆನಾಡು ಮತ್ತು ಬೆಂಗಳೂರಿಗೆ ಪ್ರತ್ಯೇಕ ಪ್ರಣಾಳಿಕೆಗಳನ್ನು ಕಾಂಗ್ರೆಸ್ ಪಕ್ಷ ಬಿಡುಗಡೆ ಮಾಡಲಿದೆ ಎಂದು ಅವರು ತಿಳಿಸಿದರು.