ಬೆಳಗಾವಿ: ನಗರದ ಕನ್ನಡ ಸಾಹಿತ್ಯ ಭವನ ಆವರಣದಲ್ಲಿ ಅ.3ರಿಂದ 7ರವರೆಗೆ 97 ನೇ ನಾಡಹಬ್ಬ ಉತ್ಸವ ಆಚರಿಸಲಾಗುತ್ತಿದೆ.
ನಾಡಹಬ್ಬ ಉತ್ಸವ ಸಮಿತಿ ಅಧ್ಯಕ್ಷ ಡಾ.ಎಚ್.ಬಿ.ರಾಜಶೇಖರ ಅವರು ಪತ್ರಕರ್ತರ ಜೊತೆ ಮಾತನಾಡಿ,1927ರಿಂದ ಬೆಳಗಾವಿಯಲ್ಲಿ ನಾಡಹಬ್ಬ ಉತ್ಸವ ಆಚರಿಸಲಾಗುತ್ತಿದೆ ಎಂದು ಹೇಳಿದರು.
ಸಮಿತಿ ಪ್ರಧಾನ ಕಾರ್ಯದರ್ಶಿ ಸಿ.ಕೆ.ಜೋರಾಪುರ ಮಾತನಾಡಿ, 3 ರಂದು ಸಂಜೆ 6ಕ್ಕೆ ಸಂಸದ ಜಗದೀಶ ಶೆಟ್ಟರ ಉದ್ಘಾಟಿಸುವರು. ಗದುಗಿನ ತೋಂಟದಾರ್ಯ ಮಠದ ಸಿದ್ದರಾಮ ಸ್ವಾಮೀಜಿ ಸಾನ್ನಿಧ್ಯ ವಹಿಸುವರು. ಶಾಸಕ ಆಸೀಫ್ ಸೇರ್ ಆಗಮಿಸುವರು. ಮಾಜಿ ಸಂಸದೆ ಮಂಗಲಾ ಅಂಗಡಿ ಅಧ್ಯಕ್ಷತೆ ವಹಿಸುವರು. ಬಿ.ಎಸ್.ಗವಿಮಠ ಉಪನ್ಯಾಸ ನೀಡುವರು ಎಂದು ತಿಳಿಸಿದರು.
4 ರಂದು ಸಂಜೆ 6 ಕ್ಕೆ ಬೆಳಗಾವಿಯಲ್ಲಿ ನಡೆದ ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವ ಸವಿನೆನಪು ಕಾರ್ಯಕ್ರಮ ನಡೆಯಲಿದೆ. ಕಾರಂಜಿಮಠದ ಗುರುಸಿದ್ದ ಸ್ವಾಮೀಜಿ ಸಾನ್ನಿಧ್ಯ ವಹಿಸುವರು. ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಉಪಸ್ಥಿತರಿರುವರು. ಎಲ್.ಎಸ್.ಶಾಸ್ತ್ರಿ ಅಧ್ಯಕ್ಷತೆ ವಹಿಸುವರು. ಸ್ವಾತಂತ್ರ್ಯ ಹೋರಾಟಗಾರರ ಕುಟುಂಬದವರನ್ನು ಸನ್ಮಾನಿಸಲಾಗುವುದು.
5 ರಂದು ಸಂಜೆ 6 ಕ್ಕೆ ಜಾಗತಿಕ ವಿದ್ಯಮಾನಗಳು ಮತ್ತು ಭಾರತ ಕಾರ್ಯಕ್ರಮದಲ್ಲಿ ನಾಗನೂರು ರುದ್ರಾಕ್ಷಿಮಠದ ಅಲ್ಲಮಪ್ರಭು ಸ್ವಾಮೀಜಿ ಸಾನ್ನಿಧ್ಯ ವಹಿಸುವರು. ಗೋವಿಂದಪ್ಪ ಗೌಡಪ್ಪಗೋಳ ಉಪಸ್ಥಿತರಿರುವರು ಎಂದರು.
6ರಂದು ಸಂಜೆ 6 ಕ್ಕೆ ಮಹಿಳಾ ದೌರ್ಜನ್ಯ ಮತ್ತು ಪುರುಷ ದೌರ್ಜನ್ಯ ಕಾರ್ಯಕ್ರಮ ನಡೆಯಲಿದೆ. ಚನ್ನಮ್ಮನ ಕಿತ್ತೂರಿನ ಕಲ್ಮಠದ ಮಡಿವಾಳ ರಾಜಯೋಗೀಂದ್ರ ಸ್ವಾಮೀಜಿ ಸಾನ್ನಿಧ್ಯ ವಹಿಸುವರು. ವಿಜಯಲಕ್ಷ್ಮಿ ಪುಟ್ಟಿ, ಮುರುಗೇಶ ಶಿವಪೂಜಿ, ರವಿ ಕೋಟಾರಗಸ್ತಿ ಉಪನ್ಯಾಸ ನೀಡುವರು. 7 ರಂದು ಸಂಜೆ 6ಕ್ಕೆ ನಡೆಯಲಿರುವ ಕವಿಗೋಷ್ಠಿಯನ್ನು ಬಸವರಾಜ ಜಗಜಂಪಿ ಉದ್ಘಾಟಿಸುವರು. ಎಚ್.ಐ.ತಿಮ್ಮಾಪುರ ಅಧ್ಯಕ್ಷತೆ ವಹಿಸುವರು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮಿ ಹೆಬ್ಬಾಳಕರ ಉಪಸ್ಥಿತರಿರುವರು. ಸಂಸದೆ ಪ್ರಿಯಾಂಕಾ ಜಾರಕಿಹೊಳಿ ಸೇರಿ ಹಲವು ಸಾಧಕರನ್ನು ಸನ್ಮಾನಿಸಲಾಗುವುದು ಎಂದು ಹೇಳಿದರು.