ಬೆಳಗಾವಿ :
ಕರ್ನಾಟಕ ಉಚ್ಚ ನ್ಯಾಯಾಲಯದ ಮುಖ್ಯ ನ್ಯಾಯಮೂರ್ತಿ ಪ್ರಸನ್ನ ವರಾಲೆ ಜ. 21 ರಂದು ಜಿಲ್ಲೆಗೆ ಭೇಟಿ ನೀಡಲಿದ್ದಾರೆ. ವಿವಿಧ ನೂತನ ನ್ಯಾಯಾಲಯ ಕಟ್ಟಡಗಳ ಉದ್ಘಾಟನೆ,
ಶಂಕುಸ್ಥಾಪನೆ ಮತ್ತಿತರ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.
ಜಿಲ್ಲಾ ನ್ಯಾಯಾಂಗ, ಲೋಕೋಪಯೋಗಿ ಇಲಾಖೆ ಹಾಗೂ ವಕೀಲರ ಸಂಘ ಬೆಳಗಾವಿಯಲ್ಲಿ ನೂತನವಾಗಿ ನಿರ್ಮಿಸಿರುವ ಹೆಚ್ಚುವರಿ ನ್ಯಾಯಾಲಯದ ಕಟ್ಟಡ ಉದ್ಘಾಟನಾ ಸಮಾರಂಭ ಮತ್ತು ವಕೀಲರ ಭವನದ ಎರಡನೇ ಅಂತಸ್ತಿನ ಶಂಕುಸ್ಥಾಪನೆ ಸಮಾರಂಭ ಮತ್ತು ಖಾನಾಪುರ ನ್ಯಾಯಾಧೀಶರ ವಸತಿ ಗ್ರಹಗಳ
ಅಡಿಗಲ್ಲು ಸಮಾರಂಭ ಮತ್ತು ರಾಮದುರ್ಗ ನ್ಯಾಯಾಲಯ ನೂತನ ಕಟ್ಟಡದ ಶಂಕುಸ್ಥಾಪನೆ ಸಮಾರಂಭ ಜನವರಿ 21ರಂದು ಬೆಳಗ್ಗೆ 10 ಕ್ಕೆ ಬೆಳಗಾವಿ ನೂತನ ನ್ಯಾಯಾಲಯದ ಆವರಣದಲ್ಲಿ ನಡೆಯಲಿದೆ.
ಕರ್ನಾಟಕ ಉಚ್ಚ ನ್ಯಾಯಾಲಯದ ಮುಖ್ಯ ನ್ಯಾಯಮೂರ್ತಿ ಪ್ರಸನ್ನ ವರಾಲೆ ಉದ್ಘಾಟಿಸಲಿದ್ದಾರೆ. ಕರ್ನಾಟಕ ಉಚ್ಚ ನ್ಯಾಯಾಲಯ ಮತ್ತು ಆಡಳಿತಾತ್ಮಕ ನ್ಯಾಯಮೂರ್ತಿ ಬಿ. ವೀರಪ್ಪ ಅಧ್ಯಕ್ಷತೆ ವಹಿಸುವರು. ಕರ್ನಾಟಕ ಉಚ್ಚ ನ್ಯಾಯಾಲಯದ ನ್ಯಾಯಮೂರ್ತಿ ಸಚಿನ್ ಮಗದುಮ್, ಕೆ.ಎಸ್. ಹೇಮಲೇಖಾ, ಅನಿಲ್ ಕಟ್ಟಿ, ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ ಕಾರಜೋಳ, ಸಂಸದೆ ಮಂಗಳ ಅಂಗಡಿ, ಶಾಸಕರಾದ ಅನಿಲ್ ಬೆನಕೆ, ಮಹದೇವಪ್ಪ ಯಾದವಾಡ ಉಪಸ್ಥಿತರಿರುವರು. ಕರ್ನಾಟಕ ರಾಜ್ಯ ವಕೀಲರ ಪರಿಷತ್ತಿನ ಉಪಾಧ್ಯಕ್ಷ ವಿನಯ್ ಮಾಂಗಲೇಕರ ವಿಶೇಷ ಅಹ್ವಾನಿತರಾಗಿದ್ದಾರೆ ಎಂದು ಪ್ರದಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಮುಸ್ತಫಾ ಹುಸೇನ್ ಎಸ್.ಎ. ತಿಳಿಸಿದ್ದಾರೆ. ಶಂಕುಸ್ಥಾಪನೆ : ಚಿಕ್ಕೋಡಿ ನ್ಯಾಯಾಲಯದ ನೂತನ ಕಟ್ಟಡದ ಶಂಕುಸ್ಥಾಪನೆ ಜನವರಿ 21ರಂದು ಮಧ್ಯಾಹ್ನ 2:30 ಕ್ಕೆ ಚಿಕ್ಕೋಡಿ ನ್ಯಾಯಾಲಯದ ಆವರಣದಲ್ಲಿ ನೆರವೇರಲಿದೆ.