ಖಾನಾಪುರ : ತಾಲೂಕಿನ ತೋಪಿನಕಟ್ಟಿ ಗ್ರಾಮದಲ್ಲಿ ನಡೆದ ಕ್ರಿಕೆಟ್ ಪಂದ್ಯಾವಳಿ ಉದ್ಘಾಟನೆಯನ್ನು ಶಾಸಕ ವಿಠ್ಠಲ ಹಲಗೇಕರ ನೆರವೇರಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು,
ಯುವಕರು ಕ್ರೀಡಾಸ್ಫೂರ್ತಿ ಮತ್ತು ಕ್ರೀಡಾ ಮನೋಭಾವದಿಂದ ಆಡಬೇಕು ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಲೈಲಾ ಶುಗರ್ಸ್ ಎಂ.ಡಿ. ಸದಾನಂದ ಪಾಟೀಲ್, ಬಿಜೆಪಿ ಯುವ ಮೋರ್ಚಾ ಜಿಲ್ಲಾ ಉಪಾಧ್ಯಕ್ಷ ಪಂಡಿತ್ ಒಗಲೆ, ಬರಮಣಿ ಪಾಟೀಲ, ಸದಾನಂದ ಮಾಸೇಕರ, ಗ್ರಾಮದ ಹಿರಿಯರು, ಪಂಚಾಯತ್ ಸದಸ್ಯರು ಸೇರಿದಂತೆ ಅನೇಕ ಗಣ್ಯರು ಉಪಸ್ಥಿತರಿದ್ದರು.


