ಬೆಳಗಾವಿ : ಸ್ವಾತಂತ್ರ್ಯ ದಿನಾಚರಣೆ ಮತ್ತು ಗಣೇಶ ಚತುರ್ಥಿಯ ಸಂದರ್ಭದಲ್ಲಿ ಪ್ರಯಾಣಿಕರ ಅನುಕೂಲಕ್ಕಾಗಿ ಮತ್ತು ನಿರೀಕ್ಷಿತ ಹೆಚ್ಚುವರಿ ಜನದಟ್ಟಣೆ ನಿಭಾಯಿಸಲು ನೈಋತ್ಯ ರೈಲ್ವೆ ಯಶವಂತಪುರ–ಮಡಗಾಂವ್ ಮತ್ತು ಸರ್.ಎಂ.ವಿಶ್ವೇಶ್ವರಯ್ಯ ರೈಲ್ವೆ ಟರ್ಮಿನಲ್ನಲ್ಲಿ (ಎಸ್ಎಂವಿಟಿ) ಬೆಂಗಳೂರು–ಬೆಳಗಾವಿ ನಡುವೆ ತಲಾ ಒಂದು ಟ್ರಿಪ್ ವಿಶೇಷ ಎಕ್ಸ್ಪ್ರೆಸ್ ರೈಲುಗಳನ್ನು ಓಡಿಸಲಿದೆ.
ವಿಶೇಷ ಎಕ್ಸ್ಪ್ರೆಸ್ ರೈಲುಗಳ ವಿವರ:
1. ರೈಲು ಸಂಖ್ಯೆ 06541/06542 ಯಶವಂತಪುರ–ಮಡಗಾಂವ್-ಯಶವಂತಪುರ ವಿಶೇಷ ಎಕ್ಸ್ಪ್ರೆಸ್ ರೈಲು (ಒಂದು ಟ್ರಿಪ್)
ರೈಲು ಸಂಖ್ಯೆ 06541 ಯಶವಂತಪುರ–ಮಡಗಾಂವ್ ವಿಶೇಷ ಎಕ್ಸ್ಪ್ರೆಸ್ ರೈಲು, ಆಗಸ್ಟ್ 14, 2025 ರಂದು ರಾತ್ರಿ 11:55ಕ್ಕೆ ಯಶವಂತಪುರದಿಂದ ಹೊರಟು, ಮರುದಿನ ಆಗಸ್ಟ್ 15ರಂದು ಸಂಜೆ 6:05ಕ್ಕೆ ಮಡಗಾಂವ್ ತಲುಪಲಿದೆ. ಮತ್ತೆ ಮರಳಿ, ರೈಲು ಸಂಖ್ಯೆ 06542 ಮಡಗಾಂವ್–ಯಶವಂತಪುರ ವಿಶೇಷ ಎಕ್ಸ್ಪ್ರೆಸ್ ರೈಲು ಆಗಸ್ಟ್ 17, 2025 ರಂದು ರಾತ್ರಿ 10:15ಕ್ಕೆ ಮಡಗಾಂವಿನಿಂದ ಹೊರಟು, ಆಗಸ್ಟ್ 18 ರಂದು ಸಂಜೆ 4:30 ಗಂಟೆಗೆ ಯಶವಂತಪುರಕ್ಕೆ ತಲುಪಲಿದೆ.
ನಿಲುಗಡೆ: ಈ ರೈಲುಗಳು ಎರಡೂ ಮಾರ್ಗಗಳಲ್ಲಿ ಚಿಕ್ಕಬಾಣಾವರ, ಕುಣಿಗಲ್, ಚನ್ನರಾಯಪಟ್ಟಣ, ಹಾಸನ, ಸಕಲೇಶಪುರ, ಸುಬ್ರಹ್ಮಣ್ಯ ರೋಡ್, ಕಬಕ ಪುತ್ತೂರು, ಬಂಟ್ವಾಳ, ಸುರತ್ಕಲ್, ಉಡುಪಿ, ಕುಂದಾಪುರ, ಬೈಂದೂರು, ಭಟ್ಕಳ, ಮುರುಡೇಶ್ವರ, ಹೊನ್ನಾವರ, ಕುಮಟಾ, ಗೋಕರ್ಣ ರೋಡ್, ಅಂಕೋಲಾ ಮತ್ತು ಕಾರವಾರ ನಿಲ್ದಾಣಗಳಲ್ಲಿ ನಿಲ್ಲಲಿವೆ. ಈ ರೈಲು ಒಟ್ಟು 18 ಬೋಗಿಗಳನ್ನು ಹೊಂದಿದ್ದು, ಅದರಲ್ಲಿ 12 ಸ್ಲೀಪರ್ ಕ್ಲಾಸ್, 4 ಜನರಲ್ ಸೆಕೆಂಡ್ ಕ್ಲಾಸ್ ಮತ್ತು 2 ಎಸ್ಎಲ್ಆರ್/ಡಿ ಬೋಗಿಗಳನ್ನು ಹೊಂದಿದೆ.
2. ರೈಲು ಸಂಖ್ಯೆ 06571/06572 ಎಸ್ಎಂವಿಟಿ ಬೆಂಗಳೂರು–ಬೆಳಗಾವಿ–ಎಸ್ಎಂವಿಟಿ ಬೆಂಗಳೂರು ವಿಶೇಷ ಎಕ್ಸ್ಪ್ರೆಸ್ ರೈಲು (ಒಂದು ಟ್ರಿಪ್):
ರೈಲು ಸಂಖ್ಯೆ 06571 ಎಸ್ಎಂವಿಟಿ ಬೆಂಗಳೂರು–ಬೆಳಗಾವಿ ವಿಶೇಷ ಎಕ್ಸ್ಪ್ರೆಸ್ ರೈಲು ಆಗಸ್ಟ್ 22, 2025ರಂದು ಸಂಜೆ 7:00 ಗಂಟೆಗೆ ಎಸ್ಎಂವಿಟಿ ಬೆಂಗಳೂರಿನಿಂದ ಹೊರಟು, ಮರುದಿನ ಬೆಳಿಗ್ಗೆ 7:30ಕ್ಕೆ ಬೆಳಗಾವಿ ತಲುಪಲಿದೆ. ಇದರ ಜೋಡಿ, ರೈಲು ಸಂಖ್ಯೆ 06572 ಬೆಳಗಾವಿ–ಎಸ್ಎಂವಿಟಿ ಬೆಂಗಳೂರು ವಿಶೇಷ ಎಕ್ಸ್ಪ್ರೆಸ್ ರೈಲು ಆಗಸ್ಟ್ 23, 2025ರಂದು ಸಂಜೆ 5:30ಕ್ಕೆ ಬೆಳಗಾವಿಯಿಂದ ಹೊರಟು, ಮರುದಿನ ಬೆಳಿಗ್ಗೆ 5:00 ಗಂಟೆಗೆ ಎಸ್ಎಂವಿಟಿ ಬೆಂಗಳೂರು ತಲುಪಲಿದೆ.
3. ರೈಲು ಸಂಖ್ಯೆ 06573/06574 ಎಸ್ಎಂವಿಟಿ ಬೆಂಗಳೂರು–ಬೆಳಗಾವಿ–ಎಸ್ಎಂವಿಟಿ ಬೆಂಗಳೂರು ವಿಶೇಷ ಎಕ್ಸ್ಪ್ರೆಸ್ ರೈಲು (ಒಂದು ಟ್ರಿಪ್):
ರೈಲು ಸಂಖ್ಯೆ 06573 ಎಸ್ಎಂವಿಟಿ ಬೆಂಗಳೂರು–ಬೆಳಗಾವಿ ವಿಶೇಷ ಎಕ್ಸ್ಪ್ರೆಸ್ ರೈಲು ಆಗಸ್ಟ್ 26, 2025 ರಂದು ಸಂಜೆ 7:00 ಗಂಟೆಗೆ ಎಸ್ಎಂವಿಟಿ ಬೆಂಗಳೂರಿನಿಂದ ಹೊರಟು, ಮರುದಿನ ಬೆಳಿಗ್ಗೆ 8:25ಕ್ಕೆ ಬೆಳಗಾವಿ ತಲುಪಲಿದೆ. ಇದರ ಜೋಡಿ, ರೈಲು ಸಂಖ್ಯೆ 06574 ಬೆಳಗಾವಿ–ಎಸ್ಎಂವಿಟಿ ಬೆಂಗಳೂರು ವಿಶೇಷ ಎಕ್ಸ್ಪ್ರೆಸ್ ರೈಲು ಆಗಸ್ಟ್ 27, 2025ರಂದು ಸಂಜೆ 5:30ಕ್ಕೆ ಬೆಳಗಾವಿಯಿಂದ ಹೊರಟು, ಮರುದಿನ ಬೆಳಿಗ್ಗೆ 5:00 ಗಂಟೆಗೆ ಎಸ್ಎಂವಿಟಿ ಬೆಂಗಳೂರು ತಲುಪಲಿದೆ.
ನಿಲುಗಡೆ: ಈ ಎರಡೂ ರೈಲುಗಳು ಸಹ ಚಿಕ್ಕಬಾಣಾವರ, ತುಮಕೂರು, ಅರಸೀಕೆರೆ, ಬೀರೂರು, ದಾವಣಗೆರೆ, ಹರಿಹರ, ಎಸ್ಎಂಎಂ ಹಾವೇರಿ, ಎಸ್ಎಸ್ಎಸ್ ಹುಬ್ಬಳ್ಳಿ, ಧಾರವಾಡ, ಅಳ್ನಾವರ, ಲೋಂಡಾ ಮತ್ತು ಖಾನಾಪುರ ನಿಲ್ದಾಣಗಳಲ್ಲಿ ನಿಲುಗಡೆ ಹೊಂದಿರಲಿವೆ. ಈ ರೈಲುಗಳಲ್ಲಿ 1 ಎಸಿ-ಟು ಟೈಯರ್, 3 ಎಸಿ-ತ್ರಿ ಟೈಯರ್, 10 ಸ್ಲೀಪರ್ ಕ್ಲಾಸ್, 3 ಜನರಲ್ ಸೆಕೆಂಡ್ ಕ್ಲಾಸ್ ಮತ್ತು 2 ಎಸ್ಎಲ್ಆರ್/ಡಿ ಸೇರಿ ಒಟ್ಟು 19 ಬೋಗಿಗಳಿವೆ.
ಹೆಚ್ಚುವರಿ ಮಾಹಿತಿ ಮತ್ತು ಟಿಕೆಟ್ ಕಾಯ್ದಿರಿಸಲು, ದಯವಿಟ್ಟು ಭಾರತೀಯ ರೈಲ್ವೆಯ ಅಧಿಕೃತ ವೆಬ್ಸೈಟ್ಗೆ ಭೇಟಿ ನೀಡಿ ಅಥವಾ ರೈಲ್ವೆ ಸಹಾಯವಾಣಿ ಸಂಖ್ಯೆ 139ಗೆ ಸಂಪರ್ಕಿಸಬಹುದು ಎಂದು ಇಲಾಖೆ ಪ್ರಕಟಣೆ ಮೂಲಕ ತಿಳಿಸಿದೆ.