ನವದೆಹಲಿ: ಟೆಸ್ಟ್ ಪರಿಣತ ಬ್ಯಾಟರ್ ಚೇತೇಶ್ವರ ಪೂಜಾರ ಅವರು ಎಲ್ಲ ಮಾದರಿಯ ಕ್ರಿಕೆಟ್ಗೆ ಇಂದು (ಭಾನುವಾರ) ನಿವೃತ್ತಿ ಘೋಷಿಸಿದ್ದಾರೆ.
ಭಾರತೀಯ ಕ್ರಿಕೆಟಿಗ, ಟೆಸ್ಟ್ ಕ್ರಿಕೆಟ್ ಸ್ಪೆಷಲಿಸ್ಟ್, ತನ್ನ ಮೃದು ಮಾತಿನಿಂದಲೇ ಗುರುತಿಸಲ್ಪಡುತ್ತಿದ್ದ ಚೇತೇಶ್ವರ ಪೂಜಾರ ಅವರು
ಟೆಸ್ಟ್ ಕ್ರಿಕೆಟ್ನಲ್ಲಿನ ತಮ್ಮ ಸಾಧನೆಗೆ ಹೆಸರುವಾಸಿ. ಭಾರತದ ಅನುಭವಿ ಕ್ರಿಕೆಟಿಗ ಚೇತೇಶ್ವರ ಪೂಜಾರ ಅವರು ಎಲ್ಲಾ ಮಾದರಿ ಆಟದಿಂದ ನಿವೃತ್ತಿಯಾಗುವ ಬಗ್ಗೆ ಅವರು ಭಾನುವಾರ (ಆಗಸ್ಟ್ 24) ಸಾಮಾಜಿಕ ಮಾಧ್ಯಮದ ಮೂಲಕ ಘೋಷಿಸಿದರು.
ಪೂಜಾರ ಟೆಸ್ಟ್ ಮತ್ತು ಏಕದಿನ ಪಂದ್ಯಗಳೆರಡರಲ್ಲೂ ಭಾರತ ಪರ ಆಡಿದ್ದಾರೆ. ಟೆಸ್ಟ್ ನಲ್ಲಿ ಅವರು ಆ 103 ಬಾರಿ ಭಾರತ ತಂಡವನ್ನು ಪ್ರತಿನಿಧಿಸಿದ್ದಾರೆ. ಐದು ಏಕದಿನ ಪಂದ್ಯಗಳನ್ನು ಆಡಿದ್ದಾರೆ. ಆದರೆ ಅವರು ಟೆಸ್ಟ್ ಪಂದ್ಯಗಳಿಂದಲೇ ಹೆಸರು ಪಡೆದವರು.
ಅವರು ಟೆಸ್ಟ್ ಕ್ರಿಕೆಟ್ನಲ್ಲಿ 7195 ರನ್ಗಳು ಮತ್ತು ಪ್ರಥಮ ದರ್ಜೆ ಕ್ರಿಕೆಟ್ನಲ್ಲಿ 21301 ರನ್ಗಳನ್ನು ಗಳಿಸಿರುವುದು ಅವರ ಸಾಧನೆಗೆ ಸಾಕ್ಷಿಯಾಗಿದೆ.
ಭಾರತೀಯ ಜೆರ್ಸಿ ಧರಿಸುವುದು, ರಾಷ್ಟ್ರಗೀತೆ ಹಾಡುವುದು ಮತ್ತು ನಾನು ಪ್ರತಿ ಬಾರಿ ಮೈದಾನಕ್ಕೆ ಕಾಲಿಟ್ಟಾಗಲೂ ನನ್ನ ಕೈಲಾದಷ್ಟು ಪ್ರಯತ್ನಿಸುವುದು – ಅದರ ನಿಜವಾದ ಅರ್ಥವನ್ನು ಪದಗಳಲ್ಲಿ ವ್ಯಕ್ತಪಡಿಸುವುದು ಅಸಾಧ್ಯ. ಆದರೆ ಎಲ್ಲಾ ಒಳ್ಳೆಯ ವಿಷಯಗಳು ಕೊನೆಗೊಳ್ಳಬೇಕು. ಅಪಾರ ಕೃತಜ್ಞತೆಯಿಂದ ನಾನು ಎಲ್ಲಾ ರೀತಿಯ ಭಾರತೀಯ ಕ್ರಿಕೆಟ್ನಿಂದ ನಿವೃತ್ತಿ ಹೊಂದಲು ನಿರ್ಧರಿಸಿದ್ದೇನೆ. ಎಲ್ಲಾ ಪ್ರೀತಿ ಮತ್ತು ಬೆಂಬಲಕ್ಕೆ ಧನ್ಯವಾದಗಳು!” ಎಂದು ಅವರು ತಮ್ಮ ಪೋಸ್ಟ್ನ ಶೀರ್ಷಿಕೆಯಲ್ಲಿ ಬರೆದಿದ್ದಾರೆ.
2019-20 ಮತ್ತು 2020-21ರಲ್ಲಿ ಆಸ್ಟ್ರೇಲಿಯಾದಲ್ಲಿ ಭಾರತ ದಾಖಲಿಸಿದ ಸತತ ಸರಣಿ ಗೆಲುವುಗಳಲ್ಲಿ ಪೂಜಾರ ಅವರು ಪ್ರಮುಖ ಪಾತ್ರ ವಹಿಸಿದ್ದರು.
ಭಾರತ ಪರ ಪೂಜಾರ ಅವರ ಕೊನೆಯ ಟೆಸ್ಟ್ ಪಂದ್ಯ ಆಡಿದ್ದು 2023 ರಲ್ಲಿ ನಡೆಯಿತು. ಅವರು ಡಬ್ಲ್ಯೂಟಿಸಿ ಫೈನಲ್ ನಲ್ಲಿ ಆಸ್ಟ್ರೇಲಿಯಾ ವಿರುದ್ಧ ಸೋತ ತಂಡದ ಭಾಗವಾಗಿದ್ದರು.