ಹುಬ್ಬಳ್ಳಿ :
ಕಿತ್ತೂರಿನಲ್ಲಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಿಸುವುದು ಶತಃಸಿದ್ಧ ಎಂದು ಬೃಹತ್ ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ ತಿಳಿಸಿದರು.
ಪತ್ರಕರ್ತರ ಜತೆ ಮಾತನಾಡಿದ ಅವರು
ರಾಜ್ಯದ 5 ಕಡೆಗಳಲ್ಲಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಿಸಲು ಸರಕಾರ ನಿರ್ಧರಿಸಿದೆ. ಮುಂದಿನ ಹದಿನೆಂಟು ತಿಂಗಳುಗಳಲ್ಲಿ ಇವುಗಳನ್ನು ನಿರ್ಮಾಣ ಮಾಡಲಾಗುವುದು. ಶಿಕ್ಷಣ ಮತ್ತು ಕೈಗಾರಿಕೆಗಳಿಂದ ಅಭಿವೃದ್ಧಿ ಸಾಧ್ಯ. ಎಲ್ಲ ಸೌಲಭ್ಯ ಬೆಂಗಳೂರಿನಲ್ಲಿ ಇರುವುದರಿಂದ ಉದ್ಯಮಿಗಳು ಆ ನಗರವನ್ನು ಆಯ್ಕೆ ಮಾಡುತ್ತಿದ್ದಾರೆ. ಆದ್ದರಿಂದ ಅಂತಾರಾಷ್ಟ್ರೀಯ ವಿಮಾನನಿಲ್ದಾಣಕ್ಕೆ ವಿರೋಧ ಮಾಡುವುದು ಸರಿಯಲ್ಲ. ಕಲಬುರ್ಗಿ ಮತ್ತು ಕಿತ್ತೂರಿನಲ್ಲಿ ಅಂತಾರಾಷ್ಟ್ರೀಯ ವಿಮಾನನಿಲ್ದಾಣ ನಿರ್ಮಿಸುವುದು ನಮ್ಮ ಗುರಿಯಾಗಿದೆ ಎಂದು ಸ್ಪಷ್ಟಪಡಿಸಿದರು.