ಅಹಮದಾಬಾದ್: ನಾಯಕನಿಗೆ ತಕ್ಕ ಆಟವಾಡಿದ ಶ್ರೇಯಸ್ ಅಯ್ಯರ್ (ಅಜೇಯ 87; 41 ಎಸೆತ, 4×5, 6X8) ಬ್ಯಾಟಿಂಗ್ನಿಂದ ಪಂಜಾಬ್ ಕಿಂಗ್ಸ್ ತಂಡವು ಐಪಿಎಲ್ ಟೂರ್ನಿಯ ಫೈನಲ್ಗೆ ಲಗ್ಗೆ ಇಟ್ಟಿತು.
ಭಾನುವಾರ ರಾತ್ರಿ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ ಎರಡನೇ ಕ್ವಾಲಿಫಯರ್ನಲ್ಲಿ ಕಿಂಗ್ಸ್ ತಂಡವು ಮುಂಬೈ ಇಂಡಿಯನ್ಸ್ ಎದುರು 5 ವಿಕೆಟ್ಗಳಿಂದ ಗೆದ್ದಿತು. ಮಂಗಳವಾರ ಇದೇ ಕ್ರೀಡಾಂಗಣದಲ್ಲಿ ನಡೆಯಲಿರುವ ಫೈನಲ್ನಲ್ಲಿ ಪಂಜಾಬ್ ತಂಡವು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು ಎದುರಿಸಲಿದೆ. ಮೊದಲ ಕ್ವಾಲಿಫಯರ್ನಲ್ಲಿ ಪಂಜಾಬ್ ತಂಡವು ಆರ್ಸಿಬಿ ಎದುರು ಸೋತಿತ್ತು. ಕಳೆದ 18 ವರ್ಷಗಳಿಂದ ಐಪಿಎಲ್ನಲ್ಲಿರುವ ಉಭಯ ತಂಡಗಳು ಇದುವರೆಗೂ ಒಂದು ಬಾರಿಯೂ ಪ್ರಶಸ್ತಿ ಜಯಿಸಿಲ್ಲ. ಆದ್ದರಿಂದ ಈ ಬಾರಿ ಟೂರ್ನಿಗೆ ಹೊಸ ಚಾಂಪಿಯನ್ ಲಭಿಸುವುದು ಖಚಿತವಾಗಿದೆ.
ಟಾಸ್ ಗೆದ್ದ ಪಂಜಾಬ್ ಕಿಂಗ್ಸ್ ತಂಡವು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿತು. ಮಳೆಯಿಂದಾಗಿ ಎರಡು ತಾಸು ವಿಳಂಬವಾಗಿ ಪಂದ್ಯ ಆರಂಭವಾಯಿತು. ಮುಂಬೈ ಇಂಡಿಯನ್ಸ್ ತಂಡವು 20 ಓವರ್ಗಳಲ್ಲಿ 6 ವಿಕೆಟ್ಗಳಿಗೆ 203 ರನ್ ಗಳಿಸಿತು. ಅದಕ್ಕುತ್ತರವಾಗಿ ಪಂಜಾಬ್ ತಂಡವು 19 ಓವರ್ಗಳಲ್ಲಿ 5 ವಿಕೆಟ್ಗೆ 207 ರನ್ ಗಳಿಸಿ ಜಯ ಸಾಧಿಸಿತು.