ಬೆಂಗಳೂರು :
ನಗರದ ಅರಮನೆ ಮೈದಾನದ ಮುಖ್ಯದ್ವಾರದ ಬಳಿ ಇಂದು ಕಾಂಗ್ರೆಸ್ ನಿಂದ ನಾ ನಾಯಕಿ ಸಮಾವೇಶಕ್ಕೆ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ – ವಾದ್ರಾ ಭಾಗವಹಿಸಿ ಭರ್ಜರಿ ಭಾಷಣ ಮಾಡಿದ್ದಾರೆ.
ದೀಪ ಬೆಳಗಿಸುವ ಮೂಲಕ
ಕಾಂಗ್ರೆಸ್ ಕಾರ್ಯಕ್ರಮವನ್ನು ಉದ್ಘಾಟಿಸಿದ್ದಾರೆ . ಬಳಿಕ ಕನ್ನಡದಲ್ಲಿ ಮಾತನಾಡಿ , ಅಕ್ಕ , ತಂಗಿ ಏಳಿ ಎದ್ದೇಳಿ ಮಲಗಿದ್ದು ಸಾಕು ಎಂದು ಹೇಳಿದರು. ದೇಶಕ್ಕೆ ಇಂದಿರಾ ಗಾಂಧಿ ಕೊಡುಗೆ ಅಪಾರ. ಬಡವರು , ಮಹಿಳೆಯರು , ರೈತರಿಗೆ ಸಾಕಷ್ಟು ಯೋಜನೆ ನೀಡಿದ್ದಾರೆ . ಕಾಂಗ್ರೆಸ್ ಅವಧಿಯಲ್ಲಿ ಸಾಕಷ್ಟು ಜನಪರ ಕೆಲಸ ಮಾಡಲಾಗಿತ್ತು . ಕೇಂದ್ರದಲ್ಲಿ ಈಗ ಬಿಜೆಪಿ ಸರ್ಕಾರ ಇದೆ . ಬೆಲೆ ಏರಿಕೆಯಿಂದ ಇಂದು ಕುಟುಂಬ ನಿರ್ವಹಣೆ ಕಷ್ಟವಾಗಿದೆ ಎಂದು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಹೇಳಿದರು .
ಬಿಜೆಪಿ ಸರ್ಕಾರ ಭ್ರಷ್ಟಾಚಾರದಲ್ಲಿ ಮುಳುಗಿದೆ. ಕರ್ನಾಟಕ ಸರ್ಕಾರದ ವಿರುದ್ಧ 40 ಪರ್ಸೆಂಟ್ ಕಮಿಷನ್ ಆರೋಪ , ಪಿಎಸ್ ಐ ನೇಮಕಾತಿ ಹಗರಣ ಸೇರಿ ಹಲವು ಇಲಾಖೆಯಲ್ಲಿ ಭ್ರಷ್ಟಾಚಾರದಲ್ಲಿ ಬಿಜೆಪಿ ಸರ್ಕಾರ ಮುಳುಗಿದೆ ಎಂದು ವಾಗ್ದಾಳಿ ನಡೆಸಿದರು. ಪ್ರತಿಯೊಂದು ಇಲಾಖೆಯಲ್ಲೂ ಭ್ರಷ್ಟಾಚಾರ ಆರೋಪ ಕೇಳಿಬಂದಿದೆ . ಕೋವಿಡ್ ವೇಳೆ ಜನರಿಗೆ ನೆರವು ನೀಡುವಲ್ಲಿ ಸರ್ಕಾರ ವಿಫಲವಾಗಿದೆ . ಉದ್ಯೋಗ ನೀಡುವಲ್ಲಿ ವಿಫಲ , ಅಗತ್ಯ ವಸ್ತುಗಳ ಬೆಲೆ ಏರಿಕೆ ಆಗಿದೆ . ಬೆಲೆ ಏರಿಕೆಯಿಂದ ಸಾಮಾನ್ಯ ಜನರು ಸಂಕಷ್ಟಕ್ಕೆ ಸಿಲುಕಿದ್ದಾರೆ . ರೈತರು , ಬಡವರ ಸಮಸ್ಯೆಗಳಿಗೆ ಕೇಂದ್ರ , ರಾಜ್ಯ ಸರ್ಕಾರ ಸ್ಪಂದಿಸಿಲ್ಲ . ಅನಗತ್ಯ ವಿವಾದಗಳನ್ನು ಸೃಷ್ಟಿಸಿ ಜನರನ್ನು ದಾರಿ ತಪ್ಪಿಸಲಾಗುತ್ತದೆ . ಶ್ರೀಮಂತರ ಪರ ಕೇಂದ್ರ ಸರ್ಕಾರ ಕೆಲಸ ಮಾಡುತ್ತಿದೆ ಎಂದು ಹೇಳಿದರು.