ಬೆಳಗಾವಿ : ಬೆಳಗಾವಿಯ ಖ್ಯಾತ ಉದ್ಯಮಿಗಳ ಮನೆ ಹಾಗೂ ಕಚೇರಿಗಳ ಮೇಲೆ ಮಂಗಳವಾರದಂದು ಐಟಿ ರೈಡ್ ನಡೆದಿದೆ.
ಖ್ಯಾತ ಉದ್ಯಮಿಗಳಾದ ದೊಡ್ಡಣ್ಣವರ, ಅಜಿತ್ ಪಾಟೀಲ, ಅಶೋಕ ಹುಂಬರವಾಡಿ ಅವರಿಗೆ ಸೇರಿರುವ ಕಚೇರಿಗಳು ಮತ್ತು ಮನೆಗಳ ಮೇಲೆ ಈ ದಾಳಿ ನಡೆಸಲಾಗಿದೆ. ಬೆಂಗಳೂರು ಮತ್ತು ಗೋವಾದ ಅಧಿಕಾರಿಗಳು ಮಂಗಳವಾರ ಬೆಳಿಗ್ಗೆಯಿಂದಲೇ ಕಾರ್ಯಾಚರಣೆಗೆ ಮುಂದಾಗಿದ್ದಾರೆ. ಎಲ್ಲಾ ಕಾಗದಪತ್ರಗಳನ್ನು ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ.