ಬೆಳಗಾವಿ : ಕೇಂದ್ರ ಸರ್ಕಾರದ ಪ್ರವಾಸೋದ್ಯಮ ಇಲಾಖೆಯ DEVELOPMENT OF ECONOMIC TOURIST CENTRE TO GLOBAL SCALE ಯೋಜನೆಯಡಿ ಶ್ರೀ ರೇಣುಕಾ ಯಲ್ಲಮ್ಮ ದೇವಿ ದೇವಸ್ಥಾನದ ಅಭಿವೃದ್ಧಿಗಾಗಿ 100 ಕೋಟಿ ರೂ. ಅನುದಾನದ ಮಂಜೂರಾಗಿದೆ. ದೇವಸ್ಥಾನದ ಸಕಲ ಅಭಿವೃದ್ಧಿ ಹಾಗೂ ಭಕ್ತಾದಿಗಳಿಗೆ ಮೂಲ ಸೌಕರ್ಯ ಒದಗಿಸುವ ಬಗ್ಗೆ ಪ್ರವಾಸೋದ್ಯಮ ಇಲಾಖೆಯ ಅಧಿಕಾರಿಗಳು ಹಾಗೂ ದೇವಸ್ಥಾನದ ಆಡಳಿತ ಮಂಡಳಿಯ ಅಧಿಕಾರಿಗಳೊಂದಿಗೆ ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಜಗದೀಶ ಶೆಟ್ಟರ ಅವರು ಸಭೆ ನಡೆಸಿದ್ದಾರೆ.ವಿವಿಧ ವಿಷಯಗಳ ಕುರಿತು ಚರ್ಚಿಸಿದರು.