ಬೆಳಗಾವಿ :
ಹುಬ್ಬಳ್ಳಿ ವಿಶ್ವ ಕನ್ನಡ ಬಳಗದಿಂದ ಕೊಡಮಾಡುವ ರಾಜ್ಯೋತ್ಸವ ಪ್ರಶಸ್ತಿಗೆ ಬೈಲಹೊಂಗಲ ತಾಲೂಕಿನ ನಾಗನೂರು ಸರಕಾರಿ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕಿ ಜಯಶ್ರೀ ಅಬ್ಬಿಗೇರಿ ಆಯ್ಕೆಯಾಗಿದ್ದಾರೆ. ಅವರ ಸಾಹಿತ್ಯ ಮತ್ತು ಶೈಕ್ಷಣಿಕ ಸೇವೆ ಪರಿಗಣಿಸಿ ಈ ಪ್ರಶಸ್ತಿ ನೀಡಲಾಗುತ್ತಿದೆ. ಹುಬ್ಬಳ್ಳಿ ಅಕ್ಕನ ಬಳಗ ಕಲ್ಯಾಣ ಮಂಟಪದಲ್ಲಿಂದು ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ ಎಂದು ಸಂಘಟನೆಯ ಅಧ್ಯಕ್ಷ ಸದಾಶಿವ ಚೌಶೆಟ್ಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.