ಬೆಳಗಾವಿ : ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರ ವಿರುದ್ಧ ಇದೀಗ ಸ್ವಪಕ್ಷದಲ್ಲೇ ಬಂಡಾಯ ದೊಡ್ಡ ಮಟ್ಟದಲ್ಲಿ ಭುಗಿಲೆದ್ದಿದೆ. ಬೆಳಗಾವಿ ತಾಲೂಕಿನ ಕಿಣಯೇ ರೆಸಾರ್ಟಿನಲ್ಲಿ ಬಂಡಾಯದ ಕಹಳೆ ಮೊಳಗಿಸಿದ್ದಾರೆ. ಶಾಸಕರಾದ ಬಸನಗೌಡ ಪಾಟೀಲ ಯತ್ನಾಳ, ರಮೇಶ ಜಾರಕಿಹೊಳಿ, ಮಾಜಿ ಸಂಸದ ಅಣ್ಣಾ ಸಾಹೇಬ್ ಜೊಲ್ಲೆ, ಮಾಜಿ ಸಚಿವ ಅರವಿಂದ ಲಿಂಬಾವಳಿ ಸೇರಿದಂತೆ ಹಲವು ಬಿಜೆಪಿಯ ಘಟಾನುಘಟಿ ನಾಯಕರು ಈ ಮಹತ್ವದ ಸಭೆಯಲ್ಲಿ ಭಾಗವಹಿಸಿದ್ದಾರೆ. ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಹಾಗೂ ವಿಜಯೇಂದ್ರ ಅವರ ವಿರುದ್ಧ ಅಸಮಾಧಾನಗೊಂಡಿರುವ ಬಿಜೆಪಿಯ ಈ ನಾಯಕರು ತಮ್ಮ ಮುಂದಿನ ಹೋರಾಟದ ಬಗ್ಗೆ ಈ ಸಭೆಯಲ್ಲಿ ಚರ್ಚಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
ವಿಜಯೇಂದ್ರ ವಿರುದ್ಧ ಮತ್ತೆ ಬಂಡಾಯ ಎದ್ದ ಯತ್ನಾಳ, ಜಾರಕಿಹೊಳಿ, ಜೊಲ್ಲೆ, ಲಿಂಬಾವಳಿ
