ಮಂಡ್ಯ :
ಈ ಸಲ ಚುನಾವಣೆಗೆ ಸ್ಪರ್ಧಿಸುವುದಿಲ್ಲ ಎಂದು ಕಾಂಗ್ರೆಸ್ ಶಾಸಕ ತಿಳಿಸಿದ್ದಾರೆ. ಈ ಸಲ ವಿಧಾನಸಭಾ ಚುನಾವಣೆಗೆ ಸ್ಪರ್ಧೆ ನಡೆಸುವುದಿಲ್ಲ ಎಂದು ಇದೀಗ ಕಾಂಗ್ರೆಸ್ ಶಾಸಕ ಯತೀಂದ್ರ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ. ವರುಣಾ ಸೇರಿದಂತೆ ಯಾವ ಕ್ಷೇತ್ರದಿಂದಲೂ ಸ್ಪರ್ಧೆ ಮಾಡುವುದಿಲ್ಲ. ತಂದೆ, ವಿಪಕ್ಷ ನಾಯಕ ಸಿದ್ದರಾಮಯ್ಯ ಅವರಿಗೆ ವರುಣಾ ಕ್ಷೇತ್ರ ಬಿಟ್ಟ ಮೇಲೆ ಯಾವ ಕ್ಷೇತ್ರದಿಂದ ಸ್ಪರ್ಧಿಸುತ್ತಾರೆ ಎಂಬ ಪ್ರಶ್ನೆ ಸೃಷ್ಟಿಯಾಗಿತ್ತು. ಇದೀಗ ಚುನಾವಣಾ ಅಖಾಡದಿಂದ ಹಿಂದೆ ಸರಿಯುವ ಮೂಲಕ ಅವರು ಅಚ್ಚರಿ ಮೂಡಿಸಿದ್ದಾರೆ.