ಬೆಳಗಾವಿ: ಬೆಳಗಾವಿಯಲ್ಲಿ ಈ ಬಾರಿ ಕರ್ನಾಟಕ ರಾಜ್ಯೋತ್ಸವ ಅತ್ಯಂತ ಸಂಭ್ರಮದಿಂದ ನಡೆದಿದೆ.
ಗುರುವಾರ ಮಧ್ಯರಾತ್ರಿಯಿಂದಲೇ ಕರ್ನಾಟಕ ರಾಜ್ಯೋತ್ಸವಕ್ಕೆ ಚಾಲನೆ ಸಿಕ್ಕಿದೆ. ಕನ್ನಡ ನಾಡು-ನುಡಿಯನ್ನು ಬಿಂಬಿಸುವ ಕನ್ನಡ ಗೀತೆಗಳು ಮೊಳಗುತ್ತಿವೆ. ಹಳದಿ ಮತ್ತು ಕೆಂಪು ಬಣ್ಣದ ಕನ್ನಡ ಬಾವುಟಗಳು ಮತ್ತು ಬಲೂನುಗಳ ಹಾರಾಟ ಎಲ್ಲೆಡೆ ಈಗ ಕಂಡು ಬಂದಿದೆ. ಬೆಳಗಾವಿ ನಗರ ಮತ್ತು ಜಿಲ್ಲೆಗಳಿಂದ ಆಗಮಿಸಿರುವ ಅಪಾರ ಸಂಖ್ಯೆಯ ಕನ್ನಡ ಸಂಘಟನೆಗಳು ಹಾಗೂ ಕನ್ನಡ ಅಭಿಮಾನಿಗಳು ರಾಜ್ಯೋತ್ಸವಕ್ಕೆ ಮೆರುಗು ನೀಡಿದ್ದಾರೆ. ಎಲ್ಲರಲ್ಲೂ ಉತ್ಸಾಹ ಹಾಗೂ ಹುರುಪು ಎದ್ದು ಕಾಣುತ್ತಿದೆ.