ಬೆಳಗಾವಿ :
ಬೆಳಗಾವಿಯ ಕುಮಾರ ಗಂಧರ್ವ ರಂಗಮಂದಿರದಲ್ಲಿ ಬುಧವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಮಹಾನಗರ ಪಾಲಿಕೆ ವತಿಯಿಂದ ಏರ್ಪಡಿಸಿದ್ದ 67ನೇ ಕರ್ನಾಟಕ ರಾಜ್ಯೋತ್ಸವದ ಅಂಗವಾಗಿ ಸಾಂಸ್ಕೃತಿಕ ಕಾರ್ಯಕ್ರಮವನ್ನು ಜಿಲ್ಲಾಧಿಕಾರಿ ನಿತೀಶ ಪಾಟೀಲ ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು, ಕರ್ನಾಟಕ ರಾಜ್ಯೋತ್ಸವ ಕನ್ನಡಿಗರ ಪಾಲಿಗೆ ದೊಡ್ಡ ಹಬ್ಬವಾಗಿದೆ. ಪ್ರತಿಯೊಬ್ಬರು ಕನ್ನಡ ಭಾಷೆಯ ಅಭಿವೃದ್ಧಿಗೆ ತಮ್ಮ ಕೊಡುಗೆ ನೀಡಬೇಕು ಎಂದು ತಿಳಿಸಿದರು.
ಮಹಾನಗರ ಪಾಲಿಕೆ ಆಯುಕ್ತ ರುದ್ರೇಶ ಘಾಳಿ ಮಾತನಾಡಿ,
ಕನ್ನಡ ಭಾಷೆ ಹಾಗೂ ಸಂಸ್ಕೃತಿಗೆ ಬಹುದೊಡ್ಡ ಹಿನ್ನೆಲೆಯಿದೆ. ನಮ್ಮ ಪರಂಪರೆಯನ್ನು ಕಾಯ್ದುಕೊಂಡು ಹೋಗುವ ಮಹತ್ತರ ಹೊಣೆ ನಮ್ಮೆಲ್ಲರ ಮೇಲಿದೆ ಎಂದರು.
ಭಾಗ್ಯಶ್ರೀ ಹುಗ್ಗಿ, ವಿದ್ಯಾವತಿ ಭಜಂತ್ರಿ, ಹಾಗೂ ಮುಂತಾದವರು ಉಪಸ್ಥಿತರಿದ್ದರು.