ಬೆಳಗಾವಿ : ಮಹಾರಾಷ್ಟ್ರದ ಶಿವ ಸೇನೆ ಮತ್ತೊಮ್ಮೆ ಪುಂಡಾಟಿಕೆ ಮೆರೆದಿದೆ. ಕೊಲ್ಲಾಪುರದಲ್ಲಿ ಕರ್ನಾಟಕ ಬಸ್ಸಿಗೆ ಸ್ಟಿಕ್ಕರ್ ಅಂಟಿಸಿರುವ ಘಟನೆ ಹಿನ್ನೆಲೆಯಲ್ಲಿ ಕರ್ನಾಟಕ ಸಾರಿಗೆ ಇದೀಗ ಸಾಕಷ್ಟು ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡಿದೆ.
ಕೊಲ್ಲಾಪುರದಲ್ಲಿ ಸೋಮವಾರ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಬಸ್ಸಿಗೆ ಶಿವಸೇನೆ ಕಾರ್ಯಕರ್ತರು ಜೈ ಮಹಾರಾಷ್ಟ್ರ ಸ್ಟಿಕ್ಕರ್ ಅಂಟಿಸಿರುವ ಘಟನೆ ಹಿನ್ನೆಲೆಯಲ್ಲಿ ಬೆಳಗಾವಿಯಿಂದ ಮಹಾರಾಷ್ಟ್ರಕ್ಕೆ ಬಸ್ ಸಂಚಾರ ಸ್ಥಗಿತಗೊಳಿಸಲಾಗಿದೆ.
ಕೊಲ್ಲಾಪುರ ಘಟನೆ ಹಿನ್ನೆಲೆಯಲ್ಲಿ ಪೊಲೀಸರು ಸಾರಿಗೆ ಸಂಸ್ಥೆ ಅಧಿಕಾರಿಗಳಿಗೆ ಸೂಚನೆ ನೀಡಿರುವ ಹಿನ್ನೆಲೆಯಲ್ಲಿ
ಮುನ್ನೆಚ್ಚರಿಕೆ ಕ್ರಮವಾಗಿ ಬಸ್ ಸಂಚಾರ ಸ್ಥಗಿತಗೊಳಿಸಲಾಗಿದೆ. ಕರ್ನಾಟಕ ಸಾರಿಗೆ ಸಂಸ್ಥೆಯ ಬಸ್ಸುಗಳು ಸದ್ಯ ಬೆಳಗಾವಿಯಿಂದ ನಿಪ್ಪಾಣಿವರೆಗೆ ಮಾತ್ರ ಹೋಗಿ ಬರುತ್ತಿವೆ ಎಂದು ಸಾರಿಗೆ ಸಂಸ್ಥೆಯ ಅಧಿಕಾರಿಗಳು ತಿಳಿಸಿದ್ದಾರೆ.
ಮಹಾರಾಷ್ಟ್ರದ ಬಸ್ ಸಂಚಾರ ತಡೆದ ಕರವೇ ಕಾರ್ಯಕರ್ತರು
ಅಥಣಿ: ಪಟ್ಟಣದಲ್ಲಿ ಸೋಮವಾರ
ಸಂಚರಿಸುತ್ತಿದ್ದ ಮಹಾರಾಷ್ಟ್ರ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಬಸ್ ಅನ್ನು ಕರ್ನಾಟಕ ರಕ್ಷಣಾ ವೇದಿಕೆ (ಶಿವರಾಮೇಗೌಡ ಬಣ) ಕಾರ್ಯಕರ್ತರು ತಡೆದು ಪ್ರತಿಭಟನೆ ನಡೆಸಿದರು.
ಕೊಲ್ಲಾಪುರದಲ್ಲಿ ಕರ್ನಾಟಕ ರಾಜ್ಯದ ಬಸ್ ಅನ್ನು ಶಿವಸೇನೆಯವರು ತಡೆದಿದ್ದಕ್ಕೆ ಪ್ರತಿಯಾಗಿ, ಮಹಾರಾಷ್ಟ್ರ ಬಸ್ ತಡೆದು ಆಕ್ರೋಶ ವ್ಯಕ್ತಪಡಿಸಿದರು.


