ಬೆಳಗಾವಿ: ಬೆಳಗಾವಿಯ “ದಿ ಹಿಂದೂ” ಪತ್ರಿಕೆಯ ಹಿರಿಯ ಸಹಾಯಕ ಸಂಪಾದಕ ರಿಷಿಕೇಶ ಬಹದ್ದೂರ್ ದೇಸಾಯಿ ಅವರು ಬೆಂಗಳೂರಿನಲ್ಲಿ ಸೋಮವಾರ ನಡೆದ ಸಮಾರಂಭದಲ್ಲಿ ಕರ್ನಾಟಕ ಮಾಧ್ಯಮ ಅಕಾಡೆಮಿಯ ವಾರ್ಷಿಕ ಪ್ರಶಸ್ತಿ ಸ್ವೀಕರಿಸಿದರು.
ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಮುಖ್ಯಮಂತ್ರಿಯವರ ಮಾಧ್ಯಮ ಸಲಹೆಗಾರ ಕೆ.ವಿ. ಪ್ರಭಾಕರ್ ಸೇರಿದಂತೆ ಗಣ್ಯರ ಉಪಸ್ಥಿತಿಯಲ್ಲಿ ಅವರು ಪ್ರಶಸ್ತಿ ಸ್ವೀಕರಿಸಿದರು.