ನವದೆಹಲಿ: ಶೂಟರ್ ಮನು ಭಾಕರ್, ಚೆಸ್ ವಿಶ್ವ ಚಾಂಪಿಯನ್ ಡಿ. ಗುಕೇಶ್, ಭಾರತ ಹಾಕಿ ಪುರುಷರ ತಂಡ ನಾಯಕ ಹಮ್ರನ್ಪ್ರೀತ್ ಸಿಂಗ್, ಪ್ಯಾರಾ ಅಥ್ಲೀಟ್ ಪ್ರವೀಣ್ ಕುಮಾರ್ ಅವರಿಗೆ ಗುರುವಾರ ಭಾರತ ಸರ್ಕಾರವು ಮೇಜರ್ ಧ್ಯಾನ್ಚಂದ್ ಖೇಲ್ ರತ್ನ ಪ್ರಶಸ್ತಿ ಘೋಷಣೆ ಮಾಡಿದೆ.
22 ವರ್ಷದ ಮನು ಭಾಕರ್ ಒಲಿಂಪಿಕ್ಸ್ನ ಒಂದೇ ಆವೃತ್ತಿಯಲ್ಲಿ ಎರಡು ಪದಕಗಳನ್ನು ಗೆದ್ದು ಇತಿಹಾಸ ಬರೆದಿದ್ದರು. 10 ಮೀಟರ್ ಏರ್ ಪಿಸ್ತೂಲ್ ವೈಯಕ್ತಿಕ ವಿಭಾಗ ಹಾಗೂ 10 ಮೀಟರ್ ಏರ್ ಪಿಸ್ತೂಲ್ ಮಿಶ್ರ ವಿಭಾಗದಲ್ಲಿ ಮನು ಕಂಚು ಜಯಿಸಿದ್ದರು.
ಇದೇ ಒಲಿಂಪಿಕ್ಸ್ ನಲ್ಲಿ ಭಾರತ ತಂಡ
ಹಮ್ರನ್ಪ್ರೀತ್ ನೇತೃತ್ವದಲ್ಲಿ
ಹಾಕಿಯಲ್ಲಿ ಕಂಚಿನ ಪದಕ ವಿಜೇತವಾಗಿತ್ತು.
18 ವರ್ಷದ ಗುಕೇಶ್ ಚಾಂಪಿಯನ್ಶಿಪ್ನಲ್ಲಿ ಗೆಲುವು ಸಾಧಿಸಿ ದಾಖಲೆ ಬರೆದಿದ್ದರು.
ಜ. 17ರಂದು ರಾಷ್ಟ್ರಪತಿ ಭವನದಲ್ಲಿ ನಡೆಯಲಿರುವ ವಿಶೇಷ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಕ್ರೀಡಾ ಇಲಾಖೆ ಗುರುವಾರ ಬಿಡುಗಡೆ ಮಾಡಿದ ಪ್ರಕಟಣೆಯಲ್ಲಿ ಹೇಳಿದೆ.