ಬೆಳಗಾವಿ : ಕಾಂಗ್ರೆಸ್ ಸರಕಾರ ಕೆಡವಲು ಪಕ್ಷದ ಶಾಸಕರಿಗೆ ಬಿಜೆಪಿ ಹಣದ ಆಮಿಷ ಒಡ್ಡುತ್ತಿದೆ ಎಂಬ ಆರೋಪಕ್ಕೆ ಕೊನೆಗೂ ಕಿತ್ತೂರು ಕಾಂಗ್ರೆಸ್ ಶಾಸಕ ಬಾಬಾ ಸಾಹೇಬ್ ಪಾಟೀಲ ಅವರು ಪ್ರತಿಕ್ರಿಯೆ ನೀಡಿದ್ದಾರೆ.
ಮಂಡ್ಯದಲ್ಲಿ ಕಾಂಗ್ರೆಸ್ ಶಾಸಕ ರವಿಕುಮಾರ್ ಗಣಿಗ ನೀಡಿರುವ ಹೇಳಿಕೆಯಲ್ಲಿ ತಮ್ಮ ಹೆಸರು ಉಲ್ಲೇಖ ಮಾಡಿರುವುದು ನಿಜವಲ್ಲ ಎಂದು ತಿಳಿಸಿದ್ದಾರೆ. ಬಿಜೆಪಿಯ ಯಾವ ನಾಯಕರು ನನ್ನನ್ನು ಸಂಪರ್ಕ ಮಾಡಿಲ್ಲ. ಆರಂಭದಲ್ಲಿ ಬಿಜೆಪಿಯಿಂದ ಆಫರ್ ಬಂದಿತ್ತು. ಆಗ ಸ್ನೇಹ, ವಿಶ್ವಾಸದ ಮೇಲೆ ಬಿಜೆಪಿಯಲ್ಲಿನ ಸ್ನೇಹಿತರು ಅಹ್ವಾನ ನೀಡಿದ್ದರು ಅಷ್ಟೇ. ಆದರೆ ಈಗ ಯಾರು ನನ್ನನ್ನು ಸಂಪರ್ಕಿಸಿಲ್ಲ. ರವಿ ಗಣಿಗ ಯಾಕೆ ಹಾಗೆ ಹೇಳಿದರೋ ಗೊತ್ತಿಲ್ಲ. ನನಗೆ ಯಾವುದೇ ಆಫರ್ ಬಂದಿಲ್ಲ ಎಂದು ತಿಳಿಸಿದ್ದಾರೆ.
ನನಗೆ ಈಗ ಯಾವುದೇ ದುಡ್ಡಿನ ಆಫರ್ ಬಂದಿಲ್ಲ. ರವಿಕುಮಾರ್ ನೀಡಿರುವ ಹೇಳಿಕೆ ಸಂಪೂರ್ಣ ಸುಳ್ಳು. ಅವರು ಯಾಕೆ ಹಾಗೆ ಹೇಳಿದ್ದಾರೆ ಎಂಬುದನ್ನು ಅವರನ್ನೇ ಕೇಳಿ. ಅವರ ಬಳಿ ಆಡಿಯೋ, ವಿಡಿಯೋ ದಾಖಲೆ ಇದ್ದರೆ ಬಿಡುಗಡೆ ಮಾಡಲಿ ಎಂದು ಪ್ರತಿಕ್ರಿಯೆ ನೀಡಿದರು.