ಬೆಂಗಳೂರು: ವಿಧಾನ ಮಂಡಲದ ಚಳಿಗಾಲದ ಅಧಿವೇಶನ
ಡಿಸೆಂಬರ್ 9 ರಿಂದ 20 ರವರೆಗೆ ಬೆಳಗಾವಿಯ ಸುವರ್ಣ ಸೌಧದಲ್ಲಿ ನಡೆಯಲಿದೆ.
ರಾಜ್ಯಪಾಲ ಥಾವರ್ ಚಂದ್ ಗೆಹೋಟ್ ಅವರಿಗೆ ಅಧಿವೇಶನ ಕರೆಯುವ ಸಂಬಂಧ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವಾಲಯದಿಂದ ಕಡತ ರವಾನೆಯಾಗಿ ಎಂದು ಮೂಲಗಳು ತಿಳಿಸಿವೆ. ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್, ಸಭಾಪತಿ ಬಸವರಾಜ ಹೊರಟ್ಟಿ ಅವರು ಇತ್ತೀಚೆಗೆ ಬೆಳಗಾವಿಗೆ ಭೇಟಿ ನೀಡಿ ಅಧಿವೇಶನಕ್ಕೆ ಸಂಬಂಧಿಸಿ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಅಗತ್ಯ ಸಿದ್ಧತೆ ಕೈಗೊಳ್ಳುವಂತೆ ಸೂಚನೆ ನೀಡಿದ್ದರು.
ಕಾಂಗ್ರೆಸ್ ಅಧಿವೇಶನ:
1924ರ ಡಿಸೆಂಬರ್ 26 ಮತ್ತು 27 ರಂದು ಬೆಳಗಾವಿಯಲ್ಲಿ 39 ನೇ ಕಾಂಗ್ರೆಸ್ ಅಧಿವೇಶನ ನಡೆದಿದ್ದು, ಮಹಾತ್ಮ ಗಾಂಧೀಜಿ ಭಾಷಣ ಮಾಡಿದ್ದರು. ಈ ಕಾರ್ಯಕ್ರಮ ನಡೆದು 100 ವರ್ಷವಾದ ಹಿನ್ನೆಲೆಯಲ್ಲಿ ಡಿಸೆಂಬರ್ 26 ಮತ್ತು 27 ರಂದು ಬೆಳಗಾವಿಯಲ್ಲಿ ಕಾಂಗ್ರೆಸ್ ಅಧಿವೇಶನ ನಡೆಸಲು ಸರ್ಕಾರ ನಿರ್ಧರಿಸಿದೆ.